ಇದೇ 17ರಿಂದ ಕೇಂದ್ರ ಬರ ಅಧ್ಯಯನ ತಂಡದ ಪ್ರವಾಸ

7

ಇದೇ 17ರಿಂದ ಕೇಂದ್ರ ಬರ ಅಧ್ಯಯನ ತಂಡದ ಪ್ರವಾಸ

Published:
Updated:

ಬೆಂಗಳೂರು: ರಾಜ್ಯದ ಬರ ಪೀಡಿತ ಪ್ರದೇಶಗಳಿಗೆ ಇದೇ 17 ರಿಂದ ಮೂರು ದಿನಗಳ ಕಾಲ ಕೇಂದ್ರ ಕೃಷಿ ಇಲಾಖೆ ಜಂಟಿ ಕಾರ್ಯದರ್ಶಿ ಅಮಿತಾಬ್‌ ಗೌತಮ್‌ ನೇತೃತ್ವದ ಅಧ್ಯಯನ ತಂಡ ಭೇಟಿ ನೀಡಲಿದೆ.

ಈ ತಂಡದಲ್ಲಿ 10 ಸದಸ್ಯರು ಇರಲಿದ್ದು, ಮೂರು ತಂಡಗಳಲ್ಲಿ ಪ್ರವಾಸ ನಡೆಸಲಿದ್ದಾರೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ.

ಅಮಿತಾಬ್‌ ನೇತೃತ್ವದ ಮೊದಲನೇ ತಂಡವು ಇದೇ 17 ರಂದು ಯಾದಗಿರಿ, ರಾಯಚೂರು, 18 ರಂದು ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಡಾ.ಮಹೇಶ್‌ ನೇತೃತ್ವದ ಎರಡನೇ ತಂಡವು ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಗದಗ ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಮಾನಸ್ ಚೌಧರಿ ನೇತೃತ್ವದ ಮೂರನೇ ತಂಡವು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ತೆರಳಲಿದೆ ಎಂದು ದೇಶ‍ಪಾಂಡೆ ಹೇಳಿದರು.

ರಾಜ್ಯದಲ್ಲಿ ಈಗಾಗಲೇ 100 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಕ್ಟೋಬರ್‌ 30 ರಂದು ಕೃಷಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ ಅವರ ಜತೆ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ರಾಜನಾಥಸಿಂಗ್‌ ಅವರಿಗೆ ಬರ ಪರಿಸ್ಥಿತಿ ವಿವರಿಸಲಾಗಿತ್ತು. ಎನ್‌ಡಿಆರ್‌ಎಫ್‌ ನಿಧಿಯಿಂದ ₹2434 ಕೋಟಿ ಪರಿಹಾರ ಒದಗಿಸಲು ಮನವಿ ಸಲ್ಲಿಸಲಾಗಿತ್ತು ಎಂದು ದೇಶಪಾಂಡೆ ತಿಳಿಸಿದರು. 

Tags: 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !