ಮಾದಕ ವಸ್ತು ಮಾರಾಟ ತಡೆಗೆ ಬಿಜೆಪಿ ಮನವಿ

7

ಮಾದಕ ವಸ್ತು ಮಾರಾಟ ತಡೆಗೆ ಬಿಜೆಪಿ ಮನವಿ

Published:
Updated:

ಬೆಂಗಳೂರು: ‘ನಗರದಲ್ಲಿ ಮಾದಕ ವಸ್ತುಗಳ ಸಾಗಣೆ ಹಾಗೂ ಮಾರಾಟ ಹೆಚ್ಚಾಗುತ್ತಿದ್ದು, ಅದರ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ನಿಯೋಗವು ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್‌ಕುಮಾರ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿತು.

ಕಮಿಷನರ್ ಕಚೇರಿಗೆ ಭೇಟಿ ನೀಡಿದ್ದ ಶಾಸಕ ಆರ್‌.ಅಶೋಕ ನೇತೃತ್ವದ ನಿಯೋಗ, ‘ಪೊಲೀಸರಿಗೆ ಖಡಕ್‌ ಸೂಚನೆ ನೀಡಬೇಕು’ ಎಂದು ಒತ್ತಾಯಿಸಿದರು.

‘ಮಾದಕ ವಸ್ತುಗಳ ಮಾರಾಟದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಆಗಿದೆ. ಅಷ್ಟಾದರೂ ರಾಜಧಾನಿಯು ಮಾದಕ ವಸ್ತುಗಳ ನಗರವಾಗಿ ಮಾರ್ಪಡುತ್ತಿದ್ದು, ಯುವಜನತೆಯು ಅಡ್ಡದಾರಿ ಹಿಡಿಯುತ್ತಿದ್ದಾರೆ. ಪೋಷಕರು ಆತಂಕದಲ್ಲಿದ್ದಾರೆ’ ಎಂದು ಹೇಳಿದರು.

‘ನಗರದ ಹಲವೆಡೆ ರಾಜಾರೋಷವಾಗಿ ಮಾದಕ ವಸ್ತು ಮಾರಾಟ ಮಾಡಲಾಗುತ್ತಿದೆ. ಅದರ ತಡೆಗೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆರೋಪಿಸಿದರು.

ಕಮಿಷನರ್ ಸುನೀಲ್‌ಕುಮಾರ್, ‘ಮಾದಕ ವಸ್ತು ಜಾಲವನ್ನು ಪೊಲೀಸರು ಪತ್ತೆ ಹಚ್ಚಿ, ತಪ್ಪಿತಸ್ಥರನ್ನು ಬಂಧಿಸುತ್ತಿದ್ದಾರೆ. ಮತ್ತಷ್ಟು ಚುರುಕಾಗಿ ಕೆಲಸ ಮಾಡುವಂತೆ ಸೂಚನೆ ನೀಡಲಾಗುವುದು’ ಎಂದು ಹೇಳಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !