ಸೋಮವಾರ, ಜೂನ್ 14, 2021
28 °C

ದುನಿಯಾ ವಿಜಯ್ ಜಾಮೀನು ಅರ್ಜಿ; ತೀರ್ಪು ಕಾಯ್ದಿರಿಸಿದ ಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ಜಿಮ್ ತರಬೇತುದಾರ ಮಾರುತಿ ಗೌಡ ಎಂಬುವರನ್ನು ಅಪಹರಿಸಿ ಹಲ್ಲೆ ಮಾಡಿದ ಆರೋಪದಡಿ ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿರುವ ನಟ ದುನಿಯಾ ವಿಜಯ್ ಹಾಗೂ ಆತನ ಸಹಚರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ 8ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ನಡೆಸಿತು.

ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳಾದ ವಿಜಯ್ ಹಾಗೂ ಪ್ರಸಾದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಆರೋಪಿಗಳ ಪರ ಹಾಗೂ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜಾಮೀನು ತೀರ್ಪನ್ನು ಸೆಪ್ಟೆಂಬರ್ 26ಕ್ಕೆ ಕಾಯ್ದಿರಿಸಿದರು.

‘ಆರೋಪಿಗಳು, ಮಾರುತಿಗೌಡ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಆ ಹೇಳಿಕೆ ಆಧರಿಸಿ ಜಾಮೀನು ರಹಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜತೆಗೆ, ವಿಜಯ್ ಮೇಲೆ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಜಾಮೀನು ಮಂಜೂರು ಮಾಡಬಾರದು’ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ವಾದಿಸಿದರು.

ಆರೋಪಿಗಳ ಪರ ವಕೀಲ ಶಿವಕುಮಾರ್, ‘ಯಾವುದೇ ಆಯುಧಗಳನ್ನೂ ಆರೋಪಿಗಳು ಬಳಸಿಲ್ಲ. ಜಾಮೀನು ಸಿಗಬಾರದು ಎಂಬ ಕಾರಣಕ್ಕೆ ನನ್ನ ಕಕ್ಷಿದಾರರ ಮೇಲೆ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದೆ. ಅವರು ಅಮಾಯಕರು. ಅವರಿಗೆ ಜಾಮೀನು ಮಂಜೂರು ಮಾಡಬೇಕು’ ಎಂದು ಪ್ರತಿವಾದಿಸಿದರು.

ಪ್ರಸಾದ್ ವಿರುದ್ಧ ಮತ್ತೊಂದು ಪ್ರಕರಣ: ಜಿಮ್ ತರಬೇತುದಾರ ಪ್ರಸಾದ್ ವಿರುದ್ಧ ವಿಜಯನಗರ ಠಾಣೆಯಲ್ಲಿ ಸೋಮವಾರ ಮತ್ತೊಂದು ಪ್ರಕರಣ ದಾಖಲಾಗಿದೆ.

‘ಸೆಪ್ಟೆಂಬರ್ 7ರಂದು ಜಿಮ್‌ನಲ್ಲಿ ಪ್ರಸಾದ್ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ’ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು