ಶುಕ್ರವಾರ, ಏಪ್ರಿಲ್ 10, 2020
19 °C
ದೇಶ ವಿರೋಧಿ ಘೋಷಣೆ ಪ್ರಕರಣ

‘ಕೇಂದ್ರ ಗಂಭೀರವಾಗಿ ಪರಿಗಣಿಸಿದೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ‘ದೇಶ ವಿರೋಧಿ ಘೋಷಣೆ ಕೂಗುವ ಪ್ರಕರಣಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ದೇಶ ವಿರೋಧಿ ಘೋಷಣೆ ಕೂಗುವ ವ್ಯಕ್ತಿಗಳು ಹಾಗೂ ಅದಕ್ಕೆ ಪರೋಕ್ಷವಾಗಿ ಬೆಂಬಲ ನೀಡುವ ಸಂಘಟನೆಗಳನ್ನು ಮಟ್ಟ ಹಾಕುತ್ತೇವೆ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇಲ್ಲಿ ಭಾನುವಾರ ಎಚ್ಚರಿಸಿದರು.

‘ಪ್ರತಿಭಟನೆಗಳನ್ನು ಕೆಲವರು ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಘಟನೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ತನಿಖೆ ನಡೆಸಲಿವೆ’ ಎಂದು ಸಂಗಯ್ಯನಪುರದಲ್ಲಿ ಅವರು ತಿಳಿಸಿದರು.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಪ್‌ ಭೇಟಿ ಹಿನ್ನೆಲೆಯಲ್ಲಿ ಕೊಳೆಗೇರಿ ಕಾಣದಂತೆ ಗೋಡೆ ಕಟ್ಟಿ ವಾಸ್ತವ ಮರೆ ಮಾಚಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ರಾಷ್ಟ್ರದ ಘನತೆಯನ್ನೂ ಗಮನದಲ್ಲಿ ಇಟ್ಟುಕೊಳ್ಳಬೇಕಿದೆ. ಸಣ್ಣಪುಟ್ಟ ಕೆಲಸಕ್ಕೂ ಕೆಲವರು ವಿರೋಧ ವ್ಯಕ್ತಪಡಿಸುತ್ತಾರೆ; ಇದು ಸರಿಯಲ್ಲ’ ಎಂದು ತಿರುಗೇಟು ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು