ಶನಿವಾರ, ಸೆಪ್ಟೆಂಬರ್ 25, 2021
27 °C

ಜುಲೈನಲ್ಲಿ ವೈದ್ಯಕೀಯ ಕೋರ್ಸ್‌ ಶುಲ್ಕ ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ಶೇ 15ರಷ್ಟು ಹೆಚ್ಚಿಸಲು ಖಾಸಗಿ ವೈದ್ಯಕೀಯ ಕಾಲೇಜುಗಳು ಒತ್ತಡ ಹೇರುತ್ತಿದ್ದು, ಜುಲೈ ಮೊದಲ ವಾರದ ವೇಳೆಗೆ ಶುಲ್ಕ ನಿಗದಿಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ತಿಳಿಸಿದೆ.

‘ಇದೀಗ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ/ ಕೌನ್ಸೆಲಿಂಗ್‌ ಪ್ರಕ್ರಿಯೆ ನಡೆಯುತ್ತಿದೆ. ಈ ತಿಂಗಳ ಅಂತ್ಯದೊಳಗೆ ಅದು ಕೊನೆಗೊಳ್ಳಬಹುದು. ನೀತಿ ಸಂಹಿತೆಯೂ ಜಾರಿಯಲ್ಲಿದೆ. ಹೀಗಾಗಿ ಜುಲೈ ಮೊದಲ ವಾರದಲ್ಲಷ್ಟೇ ಶುಲ್ಕ ಹೆಚ್ಚಳ ಕುರಿತಂತೆ ಚರ್ಚಿಸಲು ನಾವು ನಿರ್ಧರಿಸಿದ್ದೇವೆ’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ.ಪಿ.ಜಿ. ಗಿರೀಶ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಕಳೆದ ವರ್ಷ ಶೇ 8ರಷ್ಟು ಶುಲ್ಕ ಹೆಚ್ಚಳಕ್ಕೆ ಸರ್ಕಾರ ಅನುಮತಿ ನೀಡಿತ್ತು. ಹೀಗಾಗಿ ಈ ಬಾರಿ ಮತ್ತೆ ಶುಲ್ಕ ಹೆಚ್ಚಳಕ್ಕೆ ಸರ್ಕಾರ ಅನುಮತಿ ನೀಡುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ.

‘ಸರ್ಕಾರ ಶುಲ್ಕ ಹೆಚ್ಚಳ ಮಾಡದಿದ್ದರೆ ಖಾಸಗಿ ಕಾಲೇಜುಗಳ ಅವಸಾನ ನಿಶ್ಚಿತ. ಖಾಸಗಿ ಕಾಲೇಜುಗಳು ಕಡಿಮೆ ಶುಲ್ಕ ಪಡೆಯಬೇಕು ಎಂದು ಸರ್ಕಾರ ಬಯಸಿದ್ದೇ ಆದರೆ ಗುಣಮಟ್ಟವನ್ನು ಕೇಳಬಾರದು’ ಎಂದು ರಾಜ್ಯ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನದ ಅಧ್ಯಕ್ಷ ಎಂ.ಆರ್. ಜಯರಾಂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು