ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಸಾಲ ಮನ್ನಾ ಚಿಂತನೆ: ಎಚ್‌ಡಿಕೆ

Last Updated 23 ಅಕ್ಟೋಬರ್ 2018, 16:38 IST
ಅಕ್ಷರ ಗಾತ್ರ

ಬೆಂಗಳೂರು: ಶೈಕ್ಷಣಿಕ ಸಾಲ ಮನ್ನಾ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಈ ವಿಷಯ ತಿಳಿಸಿದ ಅವರು, ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸಾಲ ಪಡೆದು ಅದನ್ನು ತೀರಿಸಲಾಗದೇ ನೋವು ಅನುಭವಿಸುತ್ತಿರುವ ಕುಟುಂಬಗಳ ಮಾಹಿತಿ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಶೈಕ್ಷಣಿಕ ಸಾಲಾ ಮನ್ನಾದ ಸಾಧಕ– ಬಾಧಕ ಪರಿಶೀಲನೆ ನಡೆಸಲಾಗುವುದು ಎಂದು ಅವರು ಹೇಳಿದರು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಕುಮಾರಸ್ವಾಮಿ ಶೈಕ್ಷಣಿಕ ಸಾಲ ಮನ್ನಾದ ಭರವಸೆ ನೀಡಿದ್ದರು. ತಮ್ಮ ಸರ್ಕಾರ ಐದು ತಿಂಗಳು ಪೂರ್ಣಗೊಳಿಸಿದ ಸಂದರ್ಭದಲ್ಲಿ ಪುನಃ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT