ನಾನೇಕೆ ರಾಜೀನಾಮೆ ನೀಡಲಿ: ಶಿಕ್ಷಣ ಸಚಿವ ಮಹೇಶ್ ಪ್ರಶ್ನೆ

7

ನಾನೇಕೆ ರಾಜೀನಾಮೆ ನೀಡಲಿ: ಶಿಕ್ಷಣ ಸಚಿವ ಮಹೇಶ್ ಪ್ರಶ್ನೆ

Published:
Updated:
Deccan Herald

ಕೊಳ್ಳೇಗಾಲ: ‘ಸಚಿವ ಸಂಪುಟ ವಿಸ್ತರಣೆ ವೇಳೆ ನನ್ನನ್ನು ಕೈಬಿಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಜೆಡಿಎಸ್‌, ಕಾಂಗ್ರೆಸ್‌ ಜತೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಮೇಯ ಇಲ್ಲ’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಶುಕ್ರವಾರ ಇಲ್ಲಿ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಯಾರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಮಾತನಾಡುವುದೂ ಇಲ್ಲ. ಬಿಎಸ್‌ಪಿ ಕಾರ್ಯಕ್ರಮದಲ್ಲಿ ಪಕ್ಷದ ತತ್ವ ಸಿದ್ಧಾಂತದ ಬಗ್ಗೆ ಹೇಳಿರುವುದನ್ನೇ ಮಾಧ್ಯಮಗಳು ತಿರುಚಿವೆ. ಕಾಂಗ್ರೆಸ್‌ ಪಕ್ಷದ ಸಚಿವರು ಹಾಗೂ ಶಾಸಕರ ಜತೆ ಚೆನ್ನಾಗಿದ್ದೇನೆ’ ಎಂದರು.

‘ಕಾಂಗ್ರೆಸ್‌ ಬಗ್ಗೆ ಹಗುರವಾಗಿ ಮಾತನಾಡಲು ನಾನೇನು ಸಣ್ಣ ಹುಡುಗನಲ್ಲ. ನನ್ನನ್ನು ಸಚಿವ ಸ್ಥಾನದಿಂದ ತೆಗೆಯುವಂತೆ ಮುಖ್ಯಮಂತ್ರಿ ಮೇಲೆ ಕಾಂಗ್ರೆಸ್‌ ನಾಯಕರು ಒತ್ತಡ ಹೇರಿದ್ದಾರೆ ಎಂಬುದು ಶುದ್ಧ ಸುಳ್ಳು. ನಾನೇಕೆ ಮಂತ್ರಿಗಿರಿಗೆ ರಾಜೀನಾಮೆ ನೀಡಲಿ’ ಎಂದು ಹೇಳಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !