ಶುಕ್ರವಾರ, ಡಿಸೆಂಬರ್ 13, 2019
25 °C

ಗೋಪಿನಾಥಂನಲ್ಲಿ 19ರಂದು ಶಿಕ್ಷಣ ಸಚಿವರ ವಾಸ್ತವ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ನ.19ರಂದು ಹನೂರು ತಾಲ್ಲೂಕಿನ ಗೋಪಿನಾಥಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸೆಪ್ಟೆಂಬರ್‌ 19ರಂದು ಪಾವಗಡದ ಸರ್ಕಾರಿ ಶಾಲೆಯಲ್ಲಿ ಸಚಿವರು ವಾಸ್ತವ್ಯ ಹೂಡಿದ್ದರು. ಈ ಬಾರಿಯೂ ಅವರು ಗಡಿ ಪ್ರದೇಶದ ಶಾಲೆಯನ್ನೇ ಆಯ್ಕೆ ಮಾಡಿದ್ದಾರೆ. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 4ನೇ ತರಗತಿವರೆಗೆ ತಮಿಳು ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದ್ದು, 5ರಿಂದ 8ರವರೆಗೆ ಕನ್ನಡ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದೆ. 213 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು