ಕರಾವಳಿಯಲ್ಲಿ ಇಂದು, ಉಳಿದೆಡೆ ಸೋಮವಾರ ಈದ್ ಉಲ್ ಫಿತ್ರ್

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳನ್ನು ಬಿಟ್ಟು ಉಳಿದ ಕಡೆ ಸೋಮವಾರ ಈದ್ ಉಲ್ ಫಿತ್ರ್ ಹಬ್ಬವನ್ನು ಆಚರಿಸಲಾಗುವುದು.
ಬೆಂಗಳೂರಿನಲ್ಲಿ ಶನಿವಾರ ನಡೆದ ಕರ್ನಾಟಕ ಚಂದ್ರದರ್ಶನ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ಯಾವುದೇ ಭಾಗದಲ್ಲಿ ಶವ್ವಾಲ್ ತಿಂಗಳ ಚಂದ್ರದರ್ಶನ ಆಗಿಲ್ಲ ಎಂದು ಸಮಿತಿಯ ಮುಖ್ಯಸ್ಥ ಮಕ್ಸೂದ್ ಇಮ್ರಾನ್ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕು ಮತ್ತು ಹಾಸನ, ಚಿಕ್ಕಮಗಳೂರಿನ ಕೆಲವು ಊರುಗಳಲ್ಲಿ ಮಾತ್ರ ಭಾನುವಾರ ಈದ್ ಉಲ್ ಫಿತ್ರ್ ಹಬ್ಬ ಆಚರಿಸಲಾಗುವುದು. ಅಲ್ಲಿ ಶನಿವಾರವೇ ರಂಜಾನ್ ತಿಂಗಳ ಉಪವಾಸದ 30 ದಿನಗಳು ಪೂರ್ಣಗೊಂಡಿವೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ನಾಳೆ ರಾಜ್ಯದಾದ್ಯಂತ ಸಂಪೂರ್ಣ ಲಾಕ್ಡೌನ್: ಏನಿರುತ್ತೆ, ಏನಿರಲ್ಲ?
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.