ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ: ಈವರೆಗೆ ₹ 50.10 ಲಕ್ಷ ನಗದು ವಶ

Last Updated 14 ಮಾರ್ಚ್ 2019, 19:59 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಗೆ ರಚಿಸಲಾದ ವಿವಿಧ ತಂಡಗಳು ಈವರೆಗೆ ₹ 50.10 ಲಕ್ಷ ನಗದು ವಶಪಡಿಸಿಕೊಂಡಿದ್ದು, 21 ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡಿವೆ. ಅಲ್ಲದೆ, ಸುಮಾರು 80 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ.

ಕಳೆದ 24 ಗಂಟೆಗಳಲ್ಲಿ ಸ್ಥಿರ ಕಣ್ಗಾವಲು ತಂಡಗಳು ₹5 ಲಕ್ಷ ನಗದು ವಶಪಡಿಸಿಕೊಂಡರೆ, ಫ್ಲೈಯಿಂಗ್‌ ಸ್ಕ್ವಾಡ್‌ ತಂಡಗಳು ₹5.83 ಲಕ್ಷ ನಗದು ಮತ್ತು ₹20 ಸಾವಿರ ಮೌಲ್ಯದ ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿವೆ.

ಗದಗ ಜಿಲ್ಲೆಯ ನರಗುಂದ ಬಳಿ ತಪಾಸಣೆ ಠಾಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹76 ಲಕ್ಷ ಮೊತ್ತದ ಅಕ್ರಮ ಮದ್ಯವನ್ನು ಬುಧವಾರ ತಡರಾತ್ರಿ ವಶಪಡಿಸಿಕೊಳ್ಳಲಾಗಿದೆ.

ಜಮಖಂಡಿಯ ಬಿಜೆಪಿ ಮುಖಂಡ ಜಗದೀಶ ಗುಡಗುಂಟಿ ಅವರು ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹20 ಲಕ್ಷ ನಗದನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಗುರುವಾರ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇವರು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಯ ಮಾಲೀಕ ಮತ್ತು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT