ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಧ್ರುವನಾರಾಯಣ ಅವರಿಗಾಗಿ ವಿಧಾನ ಪರಿಷತ್ ಸ್ಥಾನ ಬಿಟ್ಟುಕೊಡಲು ಸಿದ್ಧ’

Last Updated 26 ಮೇ 2019, 18:58 IST
ಅಕ್ಷರ ಗಾತ್ರ

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸೋಲು ಕಂಡ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಧ್ರುವನಾರಾಯಣ ಅವರಿಗಾಗಿ ಪರಿಷತ್‌ ಸ್ಥಾನ ಬಿಟ್ಟುಕೊಡಲು ಸಿದ್ಧ ಎಂದು ವಿಧಾನ ಪರಿಷತ್ ಸದಸ್ಯ ಆರ್‌.ಧರ್ಮಸೇನ ಇಲ್ಲಿ ಭಾನುವಾರ ತಿಳಿಸಿದರು.

‘ಧ್ರುವನಾರಾಯಣ ಅವರ ಸೋಲಿನಿಂದ ಪಕ್ಷದ ಮುಖಂಡರಿಗೆ ಮಾತ್ರವಲ್ಲ; ಸಾರ್ವಜನಿಕರಿಗೂ ನೋವುಂಟಾಗಿದೆ. ಅವರು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ, ಪಕ್ಷ ಬಯಸಿದರೆ ಈ ಸ್ಥಾನವನ್ನು ಅವರಿಗೆ ಬಿಟ್ಟುಕೊಡುತ್ತೇನೆ. ಇದು ನನ್ನ ವೈಯಕ್ತಿಕ ನಿರ್ಧಾರ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಪಕ್ಷಕ್ಕೆ ಧ್ರುವನಾರಾಯಣ ಅವರಂಥ ನಾಯಕರ ಅಗತ್ಯವಿದೆ. ಯಾವುದೇ ವೈಯಕ್ತಿಕ ಲಾಭಕ್ಕಾಗಿ ನಾನು ಈ ಕೆಲಸ ಮಾಡುತ್ತಿಲ್ಲ. ಪಕ್ಷದ ಕಚೇರಿಯಲ್ಲಿ ಕಸ ಗುಡಿಸುವ ಕೆಲಸ ಕೊಟ್ಟರೂ ಮಾಡಲು ಸಿದ್ಧನಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT