ಶನಿವಾರ, ಸೆಪ್ಟೆಂಬರ್ 26, 2020
22 °C

ಉಪಚುನಾವಣೆ| ನಾಳೆಯಿಂದ ನೀತಿ ಸಂಹಿತೆ ಜಾರಿ: ಆಯಾ ಕ್ಷೇತ್ರಗಳಿಗೆ ಸೀಮಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ನೀತಿ ಸಂಹಿತೆ ಸೋಮವಾರದಿಂದ ಜಾರಿಗೆ ಬರಲಿದೆ. ಇಡೀ ಜಿಲ್ಲೆಯ ಬದಲಿಗೆ ಚುನಾವಣೆ ನಡೆಯುವ ಕ್ಷೇತ್ರಕ್ಕೆ ಸೀಮಿತವಾಗಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ತಿಳಿಸಿದರು.

ಭಾನುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ‘ನೀತಿ ಸಂಹಿತೆ ಇಡೀ ಜಿಲ್ಲೆಗೆ ಅನ್ವಯಿಸಿದರೆ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಈ ಮಾರ್ಪಾಡು ಮಾಡಲಾಗಿದೆ’ ಎಂದರು.

ಈ ಬಾರಿ ‘ಎಂ 3’ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುತ್ತದೆ. 2018ರಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಇದನ್ನು ಮೊದಲ ಬಾರಿಗೆ ಬಳಸಲಾಗಿತ್ತು. ಇವು ಸುಧಾರಿತ ಮತಯಂತ್ರಗಳು ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ 29 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇದು ಮಾನ್ಯವಾಗಿರುತ್ತದೆ. ಇದೇ 18ರವರೆಗೆ ನಾಮ ಪತ್ರ ಸಲ್ಲಿಕೆಗೆ ಅವಕಾಶ ಇದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು