ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ನಿಂದ ಮಂಡ್ಯದಲ್ಲಿ ಶಿವರಾಮೇಗೌಡ, ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಕಣಕ್ಕೆ

ಲೋಕಸಭೆ ಉಪಚುನಾವಣೆ
Last Updated 14 ಅಕ್ಟೋಬರ್ 2018, 10:47 IST
ಅಕ್ಷರ ಗಾತ್ರ

ಬೆಂಗಳೂರು:ಲೋಕಸಭೆ ಉಪ ಚುನಾವಣೆಗೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಎಲ್.ಆರ್.ಶಿವರಾಮೇಗೌಡ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರನ್ನು ಕಣಕ್ಕೆ ಇಳಿಸಲು ಜೆಡಿಎಸ್ ತೀರ್ಮಾನಿಸಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಪ್ರಜಾವಾಣಿಗೆ ತಿಳಿಸಿದರು.

ಶಿವರಾಮೇಗೌಡ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಮೈತ್ರಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಕಣಕ್ಕೆ ಯಾರನ್ನು ಇಳಿಸಬೇಕು ಎಂದು ಎರಡೂ ಪಕ್ಷಗಳ ನಾಯಕರು ಲೆಕ್ಕಾಚಾರ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT