ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ: ಮತ ಎಣಿಕೆಗೆ ಕ್ಷಣಗಣನೆ ಆರಂಭ

Last Updated 6 ನವೆಂಬರ್ 2018, 1:51 IST
ಅಕ್ಷರ ಗಾತ್ರ

ಬೆಂಗಳೂರು: ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದುಈ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ ರಾಮನಗರ ವಿಧಾನಸಭಾ ಕ್ಷೇತ್ರ, ಜಮಖಂಡಿ ವಿಧಾನಸಭಾ ಕ್ಷೇತ್ರ ಹಾಗೂ ಶಿವಮೊಗ್ಗ, ಮಂಡ್ಯ ಮತ್ತು ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.

ಶಿವಮೊಗ್ಗ, ಮಂಡ್ಯ, ಬಳ್ಳಾರಿ ಹಾಗೂ ರಾಮನಗರ ಮತ್ತು ಬಾಗಲಕೋಟೆಯಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.

7.45ಕ್ಕೆ ಮತಪೆಟ್ಟಿಗೆಗಳನ್ನು ಇರಿಸಿರುವ ಸ್ಟ್ರಾಂಗ್ ರೂಮ್‌ ಅನ್ನು ತೆರೆಯಲಾಗುವುದು. ನಂತರ ಸಿಬ್ಬಂದಿಗಳು ಮತ ಎಣಿಕೆ ಕಾರ್ಯ ನಡೆಸಲಿದ್ದಾರೆ. ಮೊದಲಿಗೆ ಅಂಚೆ ಮತಗಳನ್ನು ಎಣಿಕೆ ಮಾಡಲಾಗುವುದು.

ಕೇಂದ್ರಿಯ ಮೀಸಲು ಪಡೆಯ ಯೋಧರು ಇಲ್ಲಿ ಕಾವಲು ಕಾಯುತ್ತಿದ್ದು, ಬಿಗಿ ಪೊಲೀಸ್‌ ಬಂದೋ ಬಸ್ತ್ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT