ಶುಕ್ರವಾರ, ಜೂಲೈ 3, 2020
21 °C

ರಾಜ್ಯದಲ್ಲಿ ಶೀಘ್ರವೇ ಚುನಾವಣೆ ನಡೆಯಲಿದೆ: ಸಂಸದ ಡಿ.ಕೆ. ಸುರೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಮನಗರ: ಬಿಜೆಪಿಯವರೇ ಸರ್ಕಾರವನ್ನು ಬೀಳಿಸಲಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.

ಮಾಗಡಿಯಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ನರೇಂದ್ರ ಮೋದಿಯಿಂದಲೂ ಕಾಂಗ್ರೆಸ್ ಕಾರ್ಯಕ್ರಮ ಅಳಿಸಲು ಸಾಧ್ಯವಿಲ್ಲ ಎಂದರು.

ಕೇಂದ್ರ ಘೋಷಿಸಿರುವ ಬಜೆಟ್ ಯಾವುದೇ ಬಡವರಿಗೆ ಅನುಕೂಲವಾಗುವುದಿಲ್ಲ. ಸರ್ಕಾರವನ್ನು ನಾವ್ಯಾರು ಬೀಳಿಸುವ ಅಗತ್ಯವಿಲ್ಲ. ಸರ್ಕಾರವನ್ನು ಅವರೇ ಬೀಳಿಸಿಕೊಳ್ಳುತ್ತಾರೆ. ಸದ್ಯದಲ್ಲೇ ಹೊಸ ಸರ್ಕಾರ ಬರಲಿದೆ. ನಾವೆಲ್ಲರೂ ಚುನಾವಣೆಗೆ ಸಿದ್ಧರಾಗಿ, ಕಾಂಗ್ರೆಸ್ ಪಕ್ಷವನ್ನು ಈಗಿನಿಂದಲೇ ಕಟ್ಟಬೇಕು ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು