ಶನಿವಾರ, ಜೂನ್ 6, 2020
27 °C

ಗ್ರಾ. ಪಂ. ಚುನಾವಣೆ ನಡೆಸಲು ಸಾಧ್ಯವೆ? ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ಪತ್ರ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ  ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಾಧ್ಯವೇ ಎಂದು ವಿವರಣೆ ಕೋರಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗವು ಶುಕ್ರವಾರ ಪತ್ರ ಬರೆದಿದೆ. 

ರಾಜ್ಯದ 6025 ಗ್ರಾಮ ಪಂಚಾಯಿತಿಗಳ ಪೈಕಿ 5800 ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಅಧಿಕಾರವಧಿ ಜೂನ್‌ನಿಂದ ಅಗಸ್ಟ್‌ ಒಳಗಾಗಿ ಮುಕ್ತಾಯಗೊಳ್ಳಲಿದೆ. ಆದರೆ, ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು ಚುನಾವಣೆ ಪ್ರಕ್ರಿಯೆಗಳನ್ನು ಸ್ತಗಿತಗೊಳಿಸಿತ್ತು. 

ಈ ಮಧ್ಯೆ ಗ್ರಾಮ ಪಂಚಾಯಿತಿಗಳಿಗೆ ವಿಶೇಷ ಸಮಿತಿ ಅಥವಾ ಆಡಳಿತಾಧಿಕಾರಿಗಳನ್ನು ನೇಮಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪ್ರತಿಪಕ್ಷಗಳು ಸದಸ್ಯರ ಅಧಿಕಾರವಧಿಯನ್ನು ವಿಸ್ತರಿಸುವ ಪ್ರಸ್ತಾವ ಮುಂದಿಟ್ಟಿದ್ದವು. 
ಹೀಗಿರುವಾಗಲೇ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ ಚುನಾವಣೆ ನಡೆಸಲು ಸಾಧ್ಯವೇ ಎಂಬುದರ ಕುರಿತು ವಿವರಣೆ ಕೋರಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು