ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಅನುದಾನದಲ್ಲೇ 100 ಎಲೆಕ್ಟ್ರಿಕ್ ಬಸ್‌ ಖರೀದಿ

Last Updated 9 ಮೇ 2019, 19:48 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದ ಅನುದಾನದ ನೆರವಿನಿಂದಲೇ 100 ಎಲೆಕ್ಟ್ರಿಕ್ ಬಸ್‌ಗಳ ಖರೀದಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಸ್ತಾವನೆ ಸಿದ್ಧಪಡಿಸಿದೆ.

ಎಲೆಕ್ಟ್ರಿಕ್‌ ಬಸ್‌ ಯೋಜನೆಗೆ ₹80 ಕೋಟಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಬಳಿಕ ಅನುದಾನ ನೀಡಲು ಒಪ್ಪಿರಲಿಲ್ಲ. ಈ ಅನುದಾನ ಕಳೆದುಕೊಂಡ ಎರಡು ತಿಂಗಳ ಬಳಿಕ ಬಿಎಂಟಿಸಿ ಈ ನಿರ್ಧಾರ ಮಾಡಿದೆ.ಸದ್ಯದಲ್ಲೇ ಪ್ರಸ್ತಾವನೆಯನ್ನು ಸಂಸ್ಥೆ ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.

‘ಎಲೆಕ್ಟ್ರಿಕ್ ಬಸ್‌ಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಬಸ್‌ಗಳ ತಯಾರಿಕೆಗೆ ಮತ್ತು ಸಾರ್ವಜನಿಕ ಸಂಸ್ಥೆಗಳು ಈ ಬಸ್‌ಗಳನ್ನು ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರ ನೆರವು ನೀಡುತ್ತಿದೆ. ₹80 ಕೋಟಿ ನೆರವನ್ನುಮರಳಿ ಪಡೆದುಕೊಳ್ಳುವ ವಿಶ್ವಾಸವಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT