ಶನಿವಾರ, ಜೂಲೈ 4, 2020
28 °C

ವಿದ್ಯುತ್ ಮಸೂದೆ ತಿದ್ದುಪಡಿಗೆ ಕಾಂಗ್ರೆಸ್‌ ವಿರೋಧ

‍ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸರ್ಕಾರ ತರಲು ಹೊರಟಿರುವ 2020ರ ವಿದ್ಯುತ್‌ (ತಿದ್ದುಪಡಿ) ಮಸೂದೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

‘ಪ್ರಧಾನಿ ನರೇಂದ್ರ ಮೋದಿಯವರ ಸ್ನೇಹಿತರಾದ ವಿದ್ಯುತ್‌ ಕಂಪನಿಗಳ ಉದ್ಯಮಿ ಗೌತಮ್‌ ಅದಾನಿ ಹಾಗೂ ಇತರರಿಗೆ ಲಾಭ ಮಾಡಿಕೊಡಲು ಕೇಂದ್ರ ಸರ್ಕಾರ ಈ ತಿದ್ದುಪಡಿ ಮಾಡುತ್ತಿದೆ. ಈ ಕಾಯ್ದೆಯ ಜಾರಿಗೆ ಪ್ರಯತ್ನಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಎಚ್ಚರಿಸಿದ್ದಾರೆ. 

‘ಈಗ ಕೃಷಿ ಕ್ಷೇತ್ರಕ್ಕೆ (ರೈತರ ಪಂಪ್‌ಸೆಟ್‌ಗಳಿಗೆ) ಉಚಿತವಾಗಿ ವಿದ್ಯುತ್‌ ಪೂರೈಸಲಾಗುತ್ತಿದೆ. ಈ ಮಸೂದೆಯಿಂದ ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ ಬಳಕೆಗೂ ಶುಲ್ಕ ಕಟ್ಟಬೇಕಾಗುತ್ತದೆ. ಇದು ರೈತ ವಿರೋಧಿ ಮಸೂದೆ’ ಎಂದು ಕರ್ನಾಟಕ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸಚಿನ್ ಮೀಗಾ ದೂರಿದ್ದಾರೆ.

‘ಕೃಷಿ ಮತ್ತು ಇಂಧನ ಕ್ಷೇತ್ರ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಈ ಮಸೂದೆಗೆ ಒಪ್ಪಿಗೆ ಸೂಚಿಸಬಾರದು’ ಎಂದು ಅವರು ಒತ್ತಾಯಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು