ಹಂಪಾಪುರ (ಮೈಸೂರು): ಸಮೀಪದ ಮಾದಾಪುರ ಗ್ರಾಮದಲ್ಲಿ, ವ್ಯಕ್ತಿಯೊಬ್ಬರು ಶನಿವಾರ ಬೆಳಿಗ್ಗೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಯಾದಗಿರಿ ಜಿಲ್ಲೆಯ ಕಗ್ಗೇರಿಯ ಹನುಮಂತರಾಯ (45) ಮೃತರು.

ಘಟನೆ ವಿವರ: ಹೆಬ್ಬಳ್ಳ ಬಲದಂಡೆ ನಾಲೆಯ ಕಾಲುವೆ ನಿರ್ಮಾಣಕ್ಕೆಂದು ವಿಜಯಪುರ ಮತ್ತು ಯಾದಗಿರಿಯಿಂದ ಕೂಲಿ ಕಾರ್ಮಿಕರು ಎಚ್.ಡಿ.ಕೋಟೆ ತಾಲ್ಲೂಕಿಗೆ ಬಂದಿದ್ದಾರೆ. ಕಾಲುವೆ ಪಕ್ಕದಲ್ಲಿ ಟೆಂಟ್ ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ. ಇಲ್ಲಿಯೇ ವಾಸಿಸುತ್ತಿದ್ದ ಹನುಮಂತರಾಯ, ಮುಂಜಾನೆ ಬಯಲು ಬಹಿರ್ದೆಸೆಗೆ ತೆರಳಿದ ವೇಳೆಯಲ್ಲಿ ಅವರ ಮೇಲೆ ಕಾಡಾನೆಗಳು ದಾಳಿ ನಡೆಸಿವೆ. ಆಸ್ಪತ್ರೆ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.

ಪರಿಹಾರ: ಹನುಮಂತರಾಯ ಅವರ ಕುಟುಂಬದವರಿಗೆ ₹ 2 ಲಕ್ಷ ಪರಿಹಾರದ ಚೆಕ್ ನೀಡಿದ್ದು, ₹ 3 ಲಕ್ಷ ಪರಿಹಾರವನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.