ಸಾಕಾನೆ ಸಾವು: 3 ಕಡೆ ಸಿ.ಸಿ ಟಿ.ವಿ ಕ್ಯಾಮೆರಾ

7

ಸಾಕಾನೆ ಸಾವು: 3 ಕಡೆ ಸಿ.ಸಿ ಟಿ.ವಿ ಕ್ಯಾಮೆರಾ

Published:
Updated:

ಹುಣಸೂರು: ಆನೆಚೌಕೂರು ವಲಯದ ಮತ್ತಿಗೋಡು ಆನೆ ಶಿಬಿರದ ಬಳಿ ಈಚೆಗೆ ರಸ್ತೆ ಅಪಘಾತದಲ್ಲಿ ಸಾಕಾನೆ ‘ರಂಗ’ ಮೃತಪಟ್ಟ ಬಳಿಕ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಇಲ್ಲಿ ಸಂಚರಿಸುವ ವಾಹನಗಳ ಮೇಲೆ ಕಣ್ಗಾವಳು ಇಡಲು ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲು ಮುಂದಾಗಿದೆ.

ಜತೆಗೆ, ಆನೆಚೌಕೂರು ಚೆಕ್‌ಪೋಸ್ಟ್‌ನಿಂದ ವಿರಾಜಪೇಟೆ ಚೆಕ್‌ಪೋಸ್ಟ್‌ವರೆಗಿನ 12 ಕಿ.ಮೀ ವರೆಗಿನ ರಸ್ತೆಯಲ್ಲಿ ರಾತ್ರಿ ವೇಳೆ ಹುಲಿ ಸಂರಕ್ಷಣಾ ಸಿಬ್ಬಂದಿಯ 3 ತಂಡವು ಗಸ್ತು ನಡೆಸಲಿವೆ. ರಾತ್ರಿ ವೇಳೆ ವೇಗವಾಗಿ ಸಂಚರಿಸುವ ವಾಹನಗಳನ್ನು ತಡೆದು ಎಚ್ಚರಿಕೆ ನೀಡಲಿದ್ದಾರೆ.

ಆಳಲೂರು, ತಿತಿಮತಿ ಮತ್ತು ವೀರಾಜಪೇಟೆ ಚೆಕ್‌ಪೋಸ್ಟ್‌ಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗುವುದು. 2015ರಲ್ಲೇ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದು ಪ್ರತಿ ಒಂದು ಕಿ.ಮೀ.ಗೆ ಒಂದು ರಸ್ತೆ ಉಬ್ಬು ನಿರ್ಮಿಸುವಂತೆ ಮನವಿ ಮಾಡಲಾಗಿತ್ತು. ಈಗ ಮತ್ತೆ ಪತ್ರ ಬರೆಯಲಾಗಿದೆ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶಕರ ಕಚೇರಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನಕುಮಾರ್‌ ತಿಳಿಸಿದರು.

ಮತ್ತಿಗೋಡು ಆನೆ ಶಿಬಿರವನ್ನು ಬೇರೆಡೆಗೆ ಸ್ಥಳಾಂತರ ಮಾಡುವುದಿಲ್ಲ. ಶಿಬಿರದ ಭದ್ರತೆಯನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !