ಸೋಮವಾರ, ಸೆಪ್ಟೆಂಬರ್ 16, 2019
27 °C

ಅನಾರೋಗ್ಯದಿಂದ ಕಾಡಾನೆ ಸಾವು

Published:
Updated:
Prajavani

ಸಿದ್ದಾಪುರ: ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಅನಾರೋಗ್ಯದಿಂದ ಕಾಡಾನೆಯೊಂದು ಬುಧವಾರ ಬೆಳಿಗ್ಗೆ ಮೃತಪಟ್ಟಿದೆ.

ಗ್ರಾಮದ ಬಿ.ಬಿ.ಟಿ.ಸಿ ಸಂಸ್ಥೆಯ ಕಾಫಿ ತೋಟದಲ್ಲಿ ಸುಮಾರು 25 ವರ್ಷ ಪ್ರಾಯದ ಸಲಗ ನರಳಾಡುತ್ತಿರುವುದನ್ನು ಕಂಡ ಕಾರ್ಮಿಕರು, ತಕ್ಷಣ ತೋಟದ ಮಾಲೀಕರಿಗೆ ತಿಳಿಸಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ಆನೆ ಮೃತಪಟ್ಟಿದೆ.

ಬೆಳಗ್ಗಿನಿಂದ ಮಧ್ಯಾಹ್ನದವರೆಗೂ ಆನೆ ನರಳಾಡುತ್ತಿದ್ದು, ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಕಾರ್ಮಿಕರು ದೂರಿದ್ದಾರೆ.

ಪಾಲಿಬೆಟ್ಟ ಪಶು ವೈದ್ಯಾಧಿಕಾರಿ ನವೀನ್ ಕುಮಾರ್ ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಿದರು.

ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಎ.ಸಿ.ಎಫ್ ಶ್ರೀಪತಿ, ವಲಯ ಅರಣ್ಯಾಧಿಕಾರಿ ಅಶೋಕ್, ಉಪವಲಯ ಅರಣ್ಯಾಧಿಕಾರಿ ಉಮಾಶಂಕರ್, ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Post Comments (+)