ಜನತಾದರ್ಶನದಲ್ಲೇ 250 ಮಂದಿಗೆ ಉದ್ಯೋಗ

7

ಜನತಾದರ್ಶನದಲ್ಲೇ 250 ಮಂದಿಗೆ ಉದ್ಯೋಗ

Published:
Updated:
ನಿರುದ್ಯೋಗಿಗಳಿಗೆ ನೇಮಕಾತಿ ಪತ್ರ ನೀಡಲಾಯಿತು.ಎಚ್‌.ಡಿ.ಕುಮಾರಸ್ವಾಮಿ ಇದ್ದಾರೆ

ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಶನಿವಾರ ನಡೆದ ಜನತಾದರ್ಶನದಲ್ಲೇ 250 ನಿರುದ್ಯೋಗಿಗಳಿಗೆ ಉದ್ಯೋಗ ನೀಡಲಾಯಿತು.

‘ಗೃಹ ಕಚೇರಿಯಲ್ಲಿ ಇದಕ್ಕಾಗಿಯೇ ನೇಮಕಗೊಂಡಿರುವ ತಂಡವು ವಿವಿಧ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

‘ಜಿಲ್ಲಾಧಿಕಾರಿಗಳು ಜನಸಾಮಾನ್ಯರ ಸಮಸ್ಯೆ ಆಲಿಸಲು ಸಮಯ ನಿಗದಿ ಮಾಡಬೇಕು ಹಾಗೂ ಅಂಗವಿಕಲರು, ಬಡ ಹೆಣ್ಣು ಮಕ್ಕಳು ಹಾಗೂ ನಿರುದ್ಯೋಗಿಗಳ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಬಗೆಹರಿಸಬೇಕು. ಇದಕ್ಕಾಗಿ ವಾರದಲ್ಲಿ ಒಂದು ದಿನ ಮೀಸಲಿಡಬೇಕು. ಇದಕ್ಕೆ ಸುತ್ತೋಲೆ ಹೊರಡಿಸಿದ್ದೇನೆ. ಜಿಲ್ಲಾಧಿಕಾರಿಗಳಿಂದ ಬಗೆಹರಿಸಲಾಗದ ಸಮಸ್ಯೆಗಳನ್ನು ಇಲ್ಲಿಗೆ ಶಿಫಾರಸು ಮಾಡಬಹುದು’ ಎಂದರು. ಈ ಕೆಲಸವನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ತಿಂಗಳಿಗೆ ಎರಡು ಬಾರಿ ಪರಿಶೀಲಿಸುವುದಾಗಿ ತಿಳಿಸಿದರು.

‘ಜಿಲ್ಲಾ ಉಸ್ತುವಾರಿ ಕಾರ್ಯರ್ಶಿಗಳು ತಿಂಗಳಿಗೊಮ್ಮೆ ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ ಪಟ್ಟಿ ಮಾಡಬೇಕು. ಅದನ್ನು ಮುಖ್ಯ ಕಾರ್ಯದರ್ಶಿಗಳ ಮುಖಾಂತರ ನನ್ನ ಗಮನಕ್ಕೆ ತರಬೇಕು. ಆಡಳಿತದಲ್ಲಿ ಜನಸಾಮಾನ್ಯರಿಗೆ ಉಪಯೋಗವಾಗುವ ಕೆಲವು ಮಾರ್ಪಾಡು ತರಲಾಗುತ್ತಿದೆ’ ಎಂದರು.

**

ಉದ್ಯೋಗ ಪಡೆದವರಲ್ಲಿ ಕೆಲವರಿಗೆ ಎರಡು ಸಲ ಹೃದಯ ಚಿಕಿತ್ಸೆ ಆಗಿದೆ. 35–36 ವರ್ಷದವರು ಇದ್ದಾರೆ. ಬಿ.ಇ, ಎಂಟೆಕ್‌ ಮಾಡಿದವರೂ ಇದ್ದಾರೆ.

-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ಬರಹ ಇಷ್ಟವಾಯಿತೆ?

 • 9

  Happy
 • 3

  Amused
 • 0

  Sad
 • 1

  Frustrated
 • 2

  Angry

Comments:

0 comments

Write the first review for this !