ಶನಿವಾರ, ಅಕ್ಟೋಬರ್ 19, 2019
22 °C

ಡಿಕೆಶಿ ಆಪ್ತ ಬಳಗದಲ್ಲಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಇ.ಡಿ ನೋಟಿಸ್‌

Published:
Updated:

ಬೆಂಗಳೂರು: ಡಿ.ಕೆ.ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಬೆಳಗಾವಿ ಗ್ರಾಮಾಂತರದ ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಮಂಗಳವಾರ ನೋಟಿಸ್‌ ನೀಡಿದೆ.

ಸೆಪ್ಟೆಂಬರ್ 19ರಂದು ವಿಚಾರಣೆಗೆ ಬರಲು ಸೂಚನೆ ನೀಡಿದೆ. ನೋಟಿಸ್‌ ಬಂದಿರುವುದನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಖಚಿತಪಡಿಸಿದ್ದು, ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

ಸದ್ಯ ಇ.ಡಿ ವಿಚಾರಣೆಗೆ ಒಳಗಾಗಿರುವ ಡಿ.ಕೆ. ಶಿವಕುಮಾರ್ ಅವರ ಜೊತೆ ಆರ್ಥಿಕ ವ್ಯವಹಾರ ಹೊಂದಿದ್ದರು ಎಂದು ಮೂಲಗಳು ಹೇಳುತ್ತವೆ.

Post Comments (+)