ಭಾನುವಾರ, ಜನವರಿ 19, 2020
24 °C

ಭಾಷೆಯಾಗಿ ಇಂಗ್ಲಿಷ್‌ ಕಲಿಕೆಗೆ ಕ್ರಮ: ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಪಠ್ಯಪುಸ್ತಕಗಳ ಮೂಲಕ ಇಂಗ್ಲಿಷ್‌ ಅನ್ನು ಭಾಷೆಯಾಗಿ ಕಲಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದು ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಹೇಳಿದರು.

ಬಿಜೆಪಿ ಕಚೇರಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಿರುವುದಕ್ಕೆ ಕನ್ನಡಪರ ಚಿಂತಕರಿಂದ ವಿರೋಧ ವ್ಯಕ್ತವಾಗಿದೆ. ಮುಂದೆ, ಇಂಗ್ಲಿಷ್‌ ಮಾಧ್ಯಮ ನಿಲ್ಲಿಸಬೇಕೇ ಅಥವಾ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಹೆಚ್ಚು ಮಾಡಬೇಕೇ ಎಂಬ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಮೊಬೈಲ್ ನಿಷೇಧ ಚಿಂತನೆ: ಮಕ್ಕಳ ವಿಡಿಯೊವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಅಪರಾಧ. ಶಾಲಾ ಸಮಯದಲ್ಲಿ ಶಿಕ್ಷಕರಿಗೆ ಮೊಬೈಲ್‌ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸುವ ಚಿಂತನೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು