ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲಿಷ್‌ ಮಾಧ್ಯಮ:ಸಾಹಿತಿಗಳ ಒತ್ತಡಕ್ಕೆ ಮಣಿಯದ ಸರ್ಕಾರ

2019ರಿಂದಲೇ ಸಾವಿರ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಕಲಿಕೆ
Last Updated 21 ಡಿಸೆಂಬರ್ 2018, 19:26 IST
ಅಕ್ಷರ ಗಾತ್ರ

ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮದಲ್ಲಿ ಬೋಧನೆ ಆರಂಭಿಸಿದರೆ ಗೋಕಾಕ್‌ ಮಾದರಿಯ ಹೋರಾಟ ನಡೆಸುತ್ತೇವೆ ಎಂದು ಸಾಹಿತಿಗಳ ಎಚ್ಚರಿಕೆಗೆ ಮೈತ್ರಿ ಸರ್ಕಾರ ಮಣಿದಿಲ್ಲ. 2019–20ನೇ ಸಾಲಿನಿಂದಲೇ ಸಾವಿರ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮದಲ್ಲಿ ಬೋಧನೆ ನಡೆಸಲಾಗುತ್ತದೆ ಎಂದು ಸರ್ಕಾರ ಪುನರುಚ್ಚರಿಸಿದೆ.

ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ತೇಜಸ್ವಿನಿ ಗೌಡ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ‘ಬೋಧನೆ ಆರಂಭಿಸಲು ಸಕಲ ಪೂರ್ವಸಿದ್ಧತೆ ನಡೆಸಲಾಗಿದೆ’ ಎಂದಿದ್ದಾರೆ.

ಇದಕ್ಕಾಗಿ 2018–19ನೇ ಸಾಲಿನಲ್ಲಿ ಸರ್ವ ಶಿಕ್ಷಣ ಅಭಿಯಾನದ ವತಿಯಿಂದ 204 ಸಂಪನ್ಮೂಲ ಶಿಕ್ಷಕರು ಹಾಗೂ 1710 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್‌ ಭಾಷಾ ಕೌಶಲವನ್ನು ಅಭಿವೃದ್ಧಿಪಡಿಸಲು 30 ದಿನಗಳ ಇಂಗ್ಲಿಷ್‌ ಭಾಷಾ ಸಬಲೀಕರಣ ತರಬೇತಿ ಹಮ್ಮಿಕೊಳ್ಳಲಾಗಿದೆ.
ಇದಕ್ಕಾಗಿ ₹2.5 ಕೋಟಿ ಅನುದಾನ ಒದಗಿಸಲಾಗಿದೆ. ಇದಲ್ಲದೆ, ಆರ್‌ಐಇ ಸಹಯೋಗದಲ್ಲಿ ಆಂಗ್ಲ ಭಾಷಾ ಬೋಧನೆಯ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ. ಈ ಸಾಲಿನಲ್ಲಿ ಇಲ್ಲಿಯವರೆಗೆ 1,461 ಶಿಕ್ಷಕರಿಗೆ ತರಬೇತಿ ಪೂರ್ಣಗೊಳಿಸಲಾಗಿದೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT