ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಗ್ಲ ಮಾಧ್ಯಮ ಶಿಕ್ಷಕರ 4 ತರಬೇತಿ ಸಂಸ್ಥೆ ಸ್ಥಾಪನೆ

Last Updated 19 ಜುಲೈ 2019, 18:19 IST
ಅಕ್ಷರ ಗಾತ್ರ

ಬೆಂಗಳೂರು: ಈ ವರ್ಷದಿಂದ ರಾಜ್ಯದ 1 ಸಾವಿರ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿ ಆರಂಭಿಸಿರುವ ಸರ್ಕಾರ, ಮುಂದಿನ ವರ್ಷ ರಾಜ್ಯದ 4 ಕಡೆ ಆಂಗ್ಲ ಮಾಧ್ಯಮ ಶಿಕ್ಷಕರ ತರಬೇತಿ ಸಂಸ್ಥೆ ಸ್ಥಾಪಿಸಲಿದೆ.

ಸದ್ಯ ಅಂತಹ ಯಾವುದೇ ಸಂಸ್ಥೆ ಇಲ್ಲ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಆರ್‌.ಶ್ರೀನಿವಾಸ್‌ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಪರಿಶೀಲನಾ ಸಭೆಯಲ್ಲಿ ಬೆಂಗಳೂರು, ಮೈಸೂರು, ಕಲಬುರ್ಗಿ ಮತ್ತು ಬೆಳಗಾವಿ ವಿಭಾಗಗಳಲ್ಲಿ ತಲಾ ಒಂದೊಂದು ಸಂಸ್ಥೆಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ.

‘ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡಿನಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಸದ್ಯ ರಾಜ್ಯದಲ್ಲಿ ಶಿಕ್ಷಕರನ್ನು ಆಂಗ್ಲ ಭಾಷೆಯಲ್ಲಿ ಬೋಧಿಸುವುದಕ್ಕೆ ಸಿದ್ಧಪಡಿಸುವ ಸಂಸ್ಥೆ ಇಲ್ಲ. ಇದನ್ನು ಸ್ಥಾಪಿಸುವ ಅಗತ್ಯ ಎದುರಾಗಿದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಟಿಕ್‌ ಟಾಕ್‌ ನಿಗಾ: ವಿದ್ಯಾರ್ಥಿಗಳು ‘ಟಿಕ್‌ ಟಾಕ್‌’ ಆ್ಯಪ್‌ ಅನ್ನು ಅತಿಯಾಗಿ ಬಳಸದಂತೆ ನಿಗಾ ವಹಿಸಬೇಕು ಎಂದು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘವು ತನ್ನ ಎಲ್ಲಾ ಸದಸ್ಯ ಶಾಲೆಗಳಿಗೆ ಸೂಚನೆ ನೀಡಿದೆ. ಕೋಲಾರದಲ್ಲಿ ಈಚೆಗೆ ಕಾಲೇಜು ವಿದ್ಯಾರ್ಥಿನಿ ಟಿಕ್‌ ಟಾಕ್‌ ಮಾಡುತ್ತಿದ್ದಾಗ ಕೊಳಕ್ಕೆ ಬಿದ್ದು ಮೃತಪಟ್ಟ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT