ಬುಧವಾರ, ಏಪ್ರಿಲ್ 8, 2020
19 °C

ಇಎಸ್‌ಐ: ವೈದ್ಯರ ಸೇವೆ ಕಡ್ಡಾಯವಲ್ಲ: ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಇಎಸ್‌ಐ ವೈದ್ಯಕೀಯ ಕಾಲೇಜುಗಳಲ್ಲಿನ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಂದ, ಪದವಿ ಪೂರೈಸಿದ ಬಳಿಕ ಇಎಸ್‌ಐ ಆಸ್ಪತ್ರೆಗಳಲ್ಲಿ ಐದು ವರ್ಷ ಕಡ್ಡಾಯ ಸೇವೆ ಸಲ್ಲಿಸುವ ಬಗ್ಗೆ ಸರ್ವೀಸ್ ಬಾಂಡ್ ಪಡೆಯುವಂತಿಲ್ಲ’ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಈ ಕುರಿತಂತೆ ಎನ್‌.ಜಗದೀಶ್‌ ಸೇರಿದಂತೆ 24 ವೈದ್ಯರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಐದು ವರ್ಷ ಕಡ್ಡಾಯ ಸೇವೆ ಸಲ್ಲಿಸಲು ಸೂಚಿಸಿ 2018ರ ಜುಲೈ 3ರಂದು ಹೊರಡಿಸಿದ್ದ ಆದೇಶಗಳನ್ನು ನ್ಯಾಯಪೀಠ ರದ್ದುಪಡಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು