ಮಾಜಿಸಚಿವ ಈಟಿ ಶಂಭುನಾಥ ಇನ್ನಿಲ್ಲ

7

ಮಾಜಿಸಚಿವ ಈಟಿ ಶಂಭುನಾಥ ಇನ್ನಿಲ್ಲ

Published:
Updated:
Deccan Herald

ಹೊಸಪೇಟೆ: ಕರುಳು ರೋಗ ಸಂಬಂಧಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿಸಚಿವ ಈಟಿ ಶಂಭುನಾಥ (77) ಗುರುವಾರ ಮಧ್ಯಾಹ್ನ ನಿಧನರಾದರು.

ಕಳೆದ ಕೆಲವು ದಿನಗಳಿಂದ ಅವರು ಬೆಂಗಳೂರಿನ ಸೇಂಟ್‌ ಜಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಮಧ್ಯಾಹ್ನ 12ಕ್ಕೆ ಕೊನೆಯುಸಿರೆಳೆದರು. ಪತ್ನಿ ಹಾಗೂ ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

1989ರ ವಿಧಾನಸಭೆ ಚುನಾವಣೆಯಲ್ಲಿ ಹೂವಿನಹಡಗಲಿ ಕ್ಷೇತ್ರದಲ್ಲಿ ದಿ. ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್‌ ಅವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದರು. 1990ರಲ್ಲಿ ಎಸ್‌. ಬಂಗಾರಪ್ಪನವರ ಸಂಪುಟದಲ್ಲಿ ಅರಣ್ಯ ಖಾತೆ ಸಚಿವರಾಗಿದ್ದರು.
ಹಾವೇರಿ ಜಿಲ್ಲೆ ಕಾಗಿನೆಲೆಯಲ್ಲಿ ಕನಕ ಗುರು ಪೀಠ ಸ್ಥಾಪನೆಗೆ ಶ್ರಮಿಸಿದ್ದರು. ಶುಕ್ರವಾರ ಮಧ್ಯಾಹ್ನ ಹೂವಿನಹಡಗಲಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !