ಬುಧವಾರ, ಜೂನ್ 23, 2021
22 °C

ಹಾಲು ಉತ್ಪಾದಕರಿಗೆ ಈಗಿರುವ ದರ ಮುಂದುವರಿಕೆ: ಬಾಲಚಂದ್ರ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹಾಲು ಒಕ್ಕೂಟಗಳು ರೈತರಿಗೆ ಈಗ ನೀಡುತ್ತಿರುವ ದರವನ್ನೇ ಮುಂದುವರಿಸಿಕೊಂಡು ಹೋಗಲು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಲು ಒಕ್ಕೂಟಗಳಿಗೆ ಸಲಹೆ ನೀಡಿದ್ದಾರೆ.

14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು, ಆಡಳಿತ ಮಂಡಳಿ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ರೈತರಿಗೆ ಪ್ರತಿ ಲೀಟರ್‌ಗೆ ಹೆಚ್ಚಿನ ದರವನ್ನೇ ನೀಡಲಾಗುತ್ತಿದೆ. ಇದರಿಂದ ರೈತರ ಆರ್ಥಿಕ ಮಟ್ಟವೂ ಏರಿಕೆಯಾಗುತ್ತದೆ ಎಂದು ಅವರು ಹೇಳಿದರು.

ಕೊರೊನಾ ಸೋಂಕಿನಿಂದಾಗಿ ಹಾಲು ಉತ್ಪಾದನೆಗೆ ಯಾವುದೇ ತೊಂದರೆ ಆಗಿಲ್ಲ, ನಷ್ಟವೂ ಆಗಿಲ್ಲ. ಎಲ್ಲ ಹಾಲು ಒಕ್ಕೂಟಗಳ ಮೂಲಕ ಜನ ಜಾಗೃತಿಗೆ ಕ್ರಮ ತೆಗೆದುಕೊಳ್ಳಲಾಗಿದೆ ಜಾರಕಿಹೊಳಿ ತಿಳಿಸಿದರು.

ಕೆಎಂಎಫ್‌ ಉತ್ಪನ್ನಗಳ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತರಿಸುವ ಗುರಿ ಹೊಂದಿದ್ದು, ಇದಕ್ಕಾಗಿ ಎಲ್ಲ ಒಕ್ಕೂಟಗಳು ಶಕ್ತಿ ಮೀರಿ ಶ್ರಮಿಸಬೇಕು. ಹಾಲು ಶೇಖರಣೆ, ಮಾರಾಟವನ್ನು ಅಭಿವೃದ್ಧಿಪಡಿಸುವ ಸಂಬಂಧ ಅಗತ್ಯವಿರುವ ಎಲ್ಲ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಅಧಿಕಾರಿಗಳು ಹಾಲು ಉತ್ಪಾದಕರ ಜತೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು ಎಂದೂ ಅವರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು