ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

20 ದಿನಗಳಲ್ಲಿ ಕಲಬುರ್ಗಿ ವಿಮಾನನಿಲ್ದಾಣ ಉದ್ಘಾಟನೆ: ಮುಖ್ಯಮಂತ್ರಿ ಯಡಿಯೂರಪ್ಪ

ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ ಸಮಾರಂಭ
Last Updated 6 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಕೈಗಾರಿಕೆಗಳ ಉತ್ತೇಜನ ಉದ್ದೇಶದಿಂದಲೇ ಕಲಬುರ್ಗಿ ಮತ್ತು ಶಿವಮೊಗ್ಗಗಳಲ್ಲಿ ವಿಮಾನನಿಲ್ದಾಣಗಳು ನಿರ್ಮಾಣವಾಗುತ್ತಿದ್ದು, ಕಲಬುರ್ಗಿ ವಿಮಾನನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು20 ದಿನದಲ್ಲಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾದ ಸರ್‌.ಎಂ. ವಿಶ್ವೇಶ್ವರಯ್ಯ ಶ್ರೇಷ್ಠ ಉತ್ಪಾದನಾ ಪ್ರಶಸ್ತಿ ಹಾಗೂ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಹೊಸ ಕೈಗಾರಿಕಾ ನೀತಿಯನ್ನು ರೂಪಿಸಲಾಗುತ್ತಿದ್ದು, ಉದ್ಯಮಿಗಳು, ಕೈಗಾರಿಕಾ ಕ್ಷೇತ್ರದ ಪರಿಣಿತರು ಇದಕ್ಕೆ ಸಲಹೆ ನೀಡಬೇಕು. ನೂತನ ಜವಳಿ ನೀತಿ, ತೆಂಗಿನ ನಾರಿನ ಅಭಿವೃದ್ಧಿ ನೀತಿಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕೈಗಾರಿಕೆಗಳು ಎದುರಿಸುತ್ತಿರುವ ಆಡಳಿತಾತ್ಮಕ ತೊಂದರೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಆಯಾ ಭೌಗೋಳಿಕ ಪರಿಸ್ಥಿತಿಗೆ ತಕ್ಕಂತೆ ಕೈಗಾರಿಕಾ ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಮನೆ ನಿರ್ಮಿಸಲು ನೆರವಾಗಿ: ಅತಿವೃಷ್ಟಿಯಿಂದ ಒಂದೂವರೆ ಲಕ್ಷ ಮನೆಗಳು ನೆಲಸಮವಾಗಿದ್ದು, 300ಕ್ಕೂ ಅಧಿಕ ಹಳ್ಳಿಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಿಸಬೇಕಾಗಿದೆ. ಮನೆ ನಿರ್ಮಾಣದ ಈ ಮಹಾನ್‌ ಕಾರ್ಯದಲ್ಲಿ ಕೈಗಾರಿಕೆಗಳು ತಮ್ಮಿಂದಾದ ಗರಿಷ್ಠ ಕೊಡುಗೆ ನೀಡಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT