ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿಗಳ ಅವಧಿ ವಿಸ್ತರಿಸಿ: ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

Last Updated 17 ಮೇ 2020, 1:53 IST
ಅಕ್ಷರ ಗಾತ್ರ

ಬೆಂಗಳೂರು: ‘ಚುನಾವಣೆ ನಡೆಸುವವರೆಗೆ ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಸದಸ್ಯರನ್ನು ಮುಂದುವರಿಸಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ವಿಧಾನಸಭೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ಗ್ರಾಮ ಪಂಚಾಯಿತಿಗಳಿಗೆ ಹೊಸ ಆಡಳಿತ ಸಮಿತಿ ರಚಿಸುವ ಅಥವಾ ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು. ತಾತ್ಕಾಲಿಕ ವ್ಯವಸ್ಥೆ ಮಾಡಲೇಬೇಕೆಂದಿದ್ದರೆ 1987ರಲ್ಲಿ ಮಾಡಿದಂತೆ ಅವಧಿ ವಿಸ್ತರಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಕೊರೊನಾ ಬಿಕ್ಕಟ್ಟಿನ ನೆಪದಲ್ಲಿ ಚುನಾವಣೆ ನಡೆಸದೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಗಳನ್ನು ಮತ್ತು ನಾಮನಿರ್ದೇಶಿತ ಆಡಳಿತ ಸಮಿತಿ ರಚಿಸಲು ಸರ್ಕಾರ ಮುಂದಾದರೆ, ಅದು ಪ್ರಜಾಪ್ರಭುತ್ವದ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗುತ್ತದೆ’ ಎಂದೂ ಅಭಿಪ್ರಾಯಪಟ್ಟಿದ್ದಾರೆ.

‘ಗ್ರಾಮ ಪಂಚಾಯಿತಿಗಳ ಕಾರ್ಯ ವೈಖರಿ ಬಗ್ಗೆ ತಿಳಿವಳಿಕೆ ಇಲ್ಲದವರನ್ನು, ನಿರ್ದಿಷ್ಟ ಸಿದ್ಧಾಂತಗಳ ಹಿನ್ನೆಲೆ ಇರುವವರನ್ನು ಸೇರಿಸಿ ಆಡಳಿತ ಸಮಿತಿ ರಚಿಸಿದರೆ ಕೊರೊನಾದಂಥ ಬಿಕ್ಕಟ್ಟು ನಿಭಾಯಿಸುವುದು ಕಷ್ಟ. ಇದರಿಂದ ಗ್ರಾಮೀಣ ಕರ್ನಾಟಕ ತೀವ್ರ ಅನ್ಯಾಯಕ್ಕೆ ತುತ್ತಾಗುತ್ತದೆ’ ಎಂದೂ ಪತ್ರದಲ್ಲಿ ಹೇಳಿದ್ದಾರೆ.

‘ಸಂವಿಧಾನದ ಅನುಚ್ಛೇದ 243 ರ ಪ್ರಕಾರ ಚುನಾವಣೆಗಳನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ನಡೆಸಬೇಕು. ಕೊರೊನಾ ಸೋಂಕಿನ ಹೆಸರು ಹೇಳಿಕೊಂಡು ಚುನಾವಣೆ ಮುಂದೂಡಲು ಕಾನೂನಿನಲ್ಲಿ ಅವಕಾಶವಿಲ್ಲ. ಈ ಹಿಂದೆ ಹಲವು ಪ್ರಕರಣಗಳಲ್ಲಿ ನ್ಯಾಯಾಲಯಗಳು ಸಹ ನಿಗದಿಪಡಿಸಿದ ಅವಧಿಯ ಒಳಗೆ ಚುನಾವಣೆ ನಡೆಸುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡಿವೆ’ ಎಂದೂ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT