ಶನಿವಾರ, ಮೇ 30, 2020
27 °C

ಗ್ರಾಮ ಪಂಚಾಯಿತಿ ಹಾಲಿ ಸದಸ್ಯರ ಅಧಿಕಾರವಧಿ 6 ತಿಂಗಳು ವಿಸ್ತರಿಸಿ: ಜೆಡಿಎಸ್‌ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗ್ರಾಮ ಪಂಚಾಯತಿಗಳ ಹಾಲಿ ಸದಸ್ಯರನ್ನೇ ಆರು ತಿಂಗಳು ಮುಂದುವರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ವತಿಯಿಂದ ಗುರುವಾರ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಕೆ ಕುಮಾರಸ್ವಾಮಿ, ಮಾಜಿ ಸಚಿವ ಎಚ್‌.ಡಿ ರೇವಣ್ಣ ಸೇರಿದಂತೆ ಹಲವರು ಗುರುವಾರ ರಾಜ್ಯ ಚುನಾವಣಾ ಅಯುಕ್ತರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಅಧಿಕಾರ ಅವಧಿ ಮುಗಿಯುವ  ಹಂತಕ್ಕೆ ಬಂದಿದ್ದು, ಚುನಾವಣೆ ನಡೆಸುವ ಸಾಧ್ಯತೆ ಇಲ್ಲದಿರುವ ಕಾರಣ ಮುಂದೇನು ಮಾಡಬೇಕು ಎಂಬ ಬಗ್ಗೆ ಸರ್ಕಾರಕ್ಕೆ ಗೊಂದಲವುಂಟಾಗಿದೆ. ವಿಶೇಷ ಸಮಿತಿ ಅಥವಾ ಆಡಳಿತಾಧಿಕಾರಿಗಳನ್ನು ನೇಮಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆಯಾದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ. 

ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಹಾಲಿ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಇನ್ನೂ ಆರು ತಿಂಗಳು ಮುಂದುವರಿಸಬೇಕು ಎಂದು ಮನವಿ ಮಾಡಿದ್ದಾರೆ.  ಈ ಮಧ್ಯೆ ಜೆಡಿಎಸ್‌ ಕೂಡ ಸದಸ್ಯರ ಅಧಿಕಾರವಧಿಯನ್ನು ಮುಂದುವರಿಸುವ ಪ್ರಸ್ತಾವ ಸಲ್ಲಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು