ಮಂಗಳವಾರ, ಜೂನ್ 2, 2020
27 °C

ತಪ್ಪು ಪಾಸಿಟಿವ್ ಮಾಹಿತಿ, ಮೂಡಿಗೆರೆ ವೈದ್ಯಾಧಿಕಾರಿಗೆ ಸೋಂಕು ತಗುಲಿಲ್ಲ: ಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆಯ ವೈದ್ಯಾಧಿಕಾರಿಯ ಗಂಟಲ ದ್ರವ ಮಾದರಿಯನ್ನು ಮತ್ತೆ ಪರೀಕ್ಷಿಸಲಾಗಿದ್ದು ಸೋಂಕು ದೃಢಪಟ್ಟಿಲ್ಲ, ಈ ಮೊದಲು ತಪ್ಪಾಗಿ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಪಷ್ಟಪಡಿಸಿದರು.

ವೈದ್ಯಾಧಿಕಾರಿಯ ಗಂಟಲ ದ್ರವ, ರಕ್ತ ಮಾದರಿಯನ್ನು ಹಾಸನ, ಶಿವಮೊಗ್ಗ ಪ್ರಯೋಗಾಲಯದಲ್ಲಿ ಮತ್ತೆ ಪರೀಕ್ಷೆ ಮಾಡಿಸಲಾಗಿದೆ. ಸೋಂಕು ದೃಢಪಟ್ಟಿಲ್ಲ. ವೈದ್ಯಾಧಿಕಾರಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ವೈದ್ಯಾಧಿಕಾರಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 28 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.   

ವೈದ್ಯಾಧಿಕಾರಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು. ಪ್ರಾಥಮಿಕ ಸಂಪರ್ಕ ವಲಯದಲ್ಲಿ  485  ಮತ್ತು ದ್ವಿತೀಯ ಸಂಪರ್ಕದಲ್ಲಿ 961 ಮಂದಿಯನ್ನು ಗುರುತಿಸಿ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಅವರೆಲ್ಲರನ್ನು ಮನೆಗೆ ಕಳಿಸಲಾಗುವುದು ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು