ನಟಸಾರ್ವಭೌಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ: ಪುನೀತ್ ರಾಜ್‌ಕುಮಾರ್

7

ನಟಸಾರ್ವಭೌಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ: ಪುನೀತ್ ರಾಜ್‌ಕುಮಾರ್

Published:
Updated:

ಹುಬ್ಬಳ್ಳಿ: ‘ನಟಸಾರ್ವಭೌಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ನಟರು ಹಾಗೂ ತಾಂತ್ರಿಕ ವರ್ಗದವರು ತುಂಬ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಇನ್ನು ಜನರು ಚಿತ್ರ ನೋಡಿ ಆಶೀರ್ವಾದ ಮಾಡಬೇಕು’ ಎಂದು ಪುನೀತ್ ರಾಜ್‌ಕುಮಾರ್ ಹೇಳಿದರು.

ನಗರದ ನೆಹರೂ ಮೈದಾನದಲ್ಲಿ ನಡೆಯಲಿರುವ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ‘ಅಭಿಮಾನಿ ದೇವರುಗಳ ಅಭಿಮಾನ ಮತ್ತು ಪ್ರೀತಿಯಿಂದ ಚಿತ್ರ ಯಶಸ್ಸು ಕಾಣಲಿದೆ ಎಂಬ ನಂಬಿಕೆ ಇದೆ’ ಎಂದರು.

‘ಹುಬ್ಬಳ್ಳಿ ನಗರ ನನಗೆ ಹೊಸದಲ್ಲ ಈ ಹಿಂದೆ ಹಲವಾರು ಬಾರಿ ಇಲ್ಲಿಗೆ ಬಂದಿದ್ದೇನೆ’ ಎಂದು ಅವರು ತಿಳಿಸಿದರು. ರಾಘವೇಂದ್ರ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್ ಅವರು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ... 

‘ನಟಸಾರ್ವಭೌಮ' ಚಿತ್ರದ ಆಡಿಯೊ ಬಿಡುಗಡೆ: ಫೇಸ್‌ಬುಕ್‌ನಲ್ಲಿ ಪುನೀತ್ ಆಮಂತ್ರಣ

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !