ಸಿಡಿಲು, ಗೋಡೆ ಕುಸಿದು ಮೂವರ ಸಾವು

ಮಂಗಳವಾರ, ಜೂನ್ 25, 2019
30 °C

ಸಿಡಿಲು, ಗೋಡೆ ಕುಸಿದು ಮೂವರ ಸಾವು

Published:
Updated:

ಬೆಂಗಳೂರು: ರಾಜ್ಯದ ವಿವಿಧ ಕಡೆಗಳಲ್ಲಿ ಶನಿವಾರ ರಾತ್ರಿ ಮತ್ತು ಭಾನುವಾರ ಸುರಿದ ಮಳೆ ಹಾಗೂ ಸಿಡಿಲಿಗೆ ಒಟ್ಟು ನಾಲ್ವರು ಬಲಿಯಾಗಿದ್ದಾರೆ. ಮೂವರು ಸಿಡಿಲು ಬಡಿದು, ಇನ್ನೊಬ್ಬರು ಗೋಡೆ ಕುಸಿದು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಗಂಗಾಪುರ ಗ್ರಾಮದ ಕೃಷ್ಣಪ್ಪ ಹಳೇಗೌಡರ (48) ಸಿಡಿಲಿಗೆ ಬಲಿಯಾಗಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಅರೆಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ರೈತ ವಿರೂಪಾಕ್ಷಪ್ಪ (45) ಮೃತಪಟ್ಟಿದ್ದಾರೆ.

ಹಿರಿಯೂರು ತಾಲ್ಲೂಕು ಆದಿವಾಲ ಗೊಲ್ಲರಹಟ್ಟಿಯ ಆನಂದ್‌ (38) ಭಾನುವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹಲವೆಡೆ ಭಾನುವಾರ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನಾದ್ಯಂತ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವಿತ್ತು.

ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ದೊಡ್ಡಗುಳಿ ಗ್ರಾಮದ ವ್ಯಕ್ತಿಯೊಬ್ಬರು ಮಳೆಯಿಂದ ತೇವಗೊಂಡಿದ್ದ ಮನೆ ಗೋಡೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಪರಿಚಿತರೊಬ್ಬರ ಮನೆಗೆ ಹೋಗಿದ್ದಾಗ ಭಾನುವಾರ ಬೆಳಿಗ್ಗೆ ದುರ್ಘಟನೆ ನಡೆದಿದೆ. ಕೋಡಿಹಳ್ಳಿ ಹೋಬಳಿ ದೊಡ್ಡಗುಳಿ ಗ್ರಾಮದ ಕೆಂಚೇಗೌಡರ ಮಗ ಕೆಂಪೇಗೌಡ (62) ಮೃತ ವ್ಯಕ್ತಿ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !