ಬ್ಯಾಂಕ್‌ನಿಂದ ನೋಟಿಸ್‌: ರೈತ ಆತ್ಮಹತ್ಯೆ

7

ಬ್ಯಾಂಕ್‌ನಿಂದ ನೋಟಿಸ್‌: ರೈತ ಆತ್ಮಹತ್ಯೆ

Published:
Updated:
Deccan Herald

ಗುಂಡ್ಲುಪೇಟೆ: ಸಾಲ ಮರುಪಾವತಿಸುವಂತೆ ಬ್ಯಾಂಕ್‌ ನೀಡಿದ ನೋಟಿಸ್‌ಗೆ ಹೆದರಿ ತಾಲ್ಲೂಕಿನ ಕೆಲಸೂರು ಗ್ರಾಮದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಮಹದೇವಪ್ಪ (65) ಆತ್ಮಹತ್ಯೆ ಮಾಡಿಕೊಂಡವರು. ಎಸ್‌ಬಿಐನಲ್ಲಿ ₹6 ಲಕ್ಷ ಸಾಲ ಮಾಡಿದ್ದರು. ಸಾಲ ತೀರಿಸುವಂತೆ ಎರಡು ದಿನಗಳ ಹಿಂದೆ ಬ್ಯಾಂಕ್‌ನಿಂದ ನೋಟಿಸ್‌ ಬಂದಿತ್ತು. ಇದರಿಂದ ಹೆದರಿ ಜಮೀನಿನಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ಗ್ರಾಮದ ಇನ್ನೂ 6 ಮಂದಿಗೆ ಬ್ಯಾಂಕ್‌ ನೋಟಿಸ್‌ ನೀಡಿದೆ.

‘ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 4 ಎಕರೆ ಜಮೀನು ಇದ್ದು, ಬ್ಯಾಂಕಿನಲ್ಲಿ ಸಾಲ ಮಾಡಿದ್ದರು. ಈ ಕುರಿತು ತಹಶೀಲ್ದಾರ್‌ ವರದಿ ನೀಡಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 2

  Sad
 • 1

  Frustrated
 • 1

  Angry

Comments:

0 comments

Write the first review for this !