ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಪ್ಪನ್‌ಪೇಟೆ: ಪ್ರತಿಭಟನಾನಿರತ ರೈತ ಸಾವು

ಬಗರ್‌ಹುಕುಂ ಅರಣ್ಯಭೂಮಿ ತೆರವು ಕಾರ್ಯಾಚರಣೆ ನಿಲ್ಲಿಸಲು ಆಗ್ರಹ
Last Updated 16 ನವೆಂಬರ್ 2018, 16:38 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ: ಬಗರ್‌ಹುಕುಂ ಅರಣ್ಯ ಭೂಮಿ ತೆರವು ಕಾರ್ಯಚರಣೆ ನಡೆಸದಂತೆ ಆಗ್ರಹಿಸಿ ಮಸರೂರು– ಮಾಣಿಕೆರೆ ರೈತರು ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಸರೂರು ಗ್ರಾಮದ ರೈತ ಲಕ್ಷ್ಮಣಪ್ಪ (65) ಅಸ್ವಸ್ಥಗೊಂಡು, ಮೃತಪಟ್ಟರು.

ಇದರಿಂದ ಆಕ್ರೋಶಗೊಂಡ ರೈತರು ಹೆಣವನ್ನು ರಸ್ತೆ ಮೇಲೆ ಇಟ್ಟು ಪ್ರತಿಭಟನೆ ಮುಂದುವರಿಸಿದರು. ಅರಣ್ಯ ಅಧಿಕಾರಿಯನ್ನು ತಕ್ಷಣ ವರ್ಗಾವಣೆ ಮಾಡಬೇಕು. ಮೃತಪಟ್ಟ ಲಕ್ಷ್ಮಣಪ್ಪ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ಘೋಷಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಸ್ಥಳಕ್ಕೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಹರತಾಳು ಎಚ್‌. ಹಾಲಪ್ಪ, ಆರಗ ಜ್ಞಾನೇಂದ್ರ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ರೈತರ ಕುಟುಂಬಕ್ಕೆ ಪರಿಹಾರದ ಭರವಸೆ ನೀಡಿದರು.

ಬಗರ್‌ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸಂಸದ ಬಿ.ವೈ. ರಾಘವೇಂದ್ರ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT