ಶನಿವಾರ, ಫೆಬ್ರವರಿ 29, 2020
19 °C

ಫ್ಯಾಸಿಸ್ಟ್ ಸಿದ್ಧಾಂತ ಎಂದಿಗೂ ಜನರ ಹೃದಯ ಗೆಲ್ಲಲು ಸಾಧ್ಯವಿಲ್ಲ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಮೂರನೇ ಬಾರಿ ಗದ್ದುಗೆ ಹಿಡಿಯುವುದು ಬಹುತೇಕ ಖಚಿತವಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಆಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 'ಅರವಿಂದ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಹೃದಯಪೂರ್ವಕ ಅಭಿನಂದನೆಗಳು. ಫ್ಯಾಸಿಸ್ಟ್ ಸಿದ್ಧಾಂತವು ಎಂದಿಗೂ ಜನರ ಹೃದಯ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ದೆಹಲಿ ಜನರು ತೋರಿಸಿದ್ದಾರೆ. ಹಣ, ತೋಳ್ಬಲಗಳಿಲ್ಲದೆಯೂ ಅಭಿವೃದ್ಧಿಯನ್ನೇ ಮಾನದಂಡವನ್ನಾಗಿಸಿ ಯಶಸ್ವಿ ರಾಜಕಾರಣದ ಸಾಧ್ಯತೆಯನ್ನು ಸಾಕ್ಷೀಕರಿಸಿದ ಎಎಪಿ ಹಾಗೂ ದೆಹಲಿ ಮತದಾರರಿಗೆ ಅಭಿನಂದನೆ' ಎಂದು ಹೇಳಿದ್ದಾರೆ.

ಅಭಿವೃದ್ಧಿಯ ಹರಿಕಾರನನ್ನು 'ಭಯೋತ್ಪಾದಕ' ಎಂದಿದ್ದಕ್ಕಾಗಿ ತಕ್ಕ ಪಾಠ ಕಲಿಸಿದ್ದಾರೆ. ಈ ಮೂಲಕ ಪ್ರಾದೇಶಿಕ ಪಕ್ಷದ ಅಗತ್ಯತೆಯನ್ನು ಎತ್ತಿಹಿಡಿದ ದೆಹಲಿಯ ಮತದಾರರು ತಮ್ಮ ಆದ್ಯತೆ ಅಭಿವೃದ್ಧಿಗಷ್ಟೇ ಎಂಬುದಕ್ಕೆ ಮೇಲ್ಪಂಕ್ತಿ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ, ಅದರಲ್ಲೂ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸೇರಿದಂತೆ ಇಡೀ ಕೇಂದ್ರ ಸರಕಾರ ತನ್ನ 'ಚಾಣಕ್ಯ' ಬಲ ಪ್ರದರ್ಶಿಸಿದರೂ ದೆಹಲಿಯ ಪ್ರಬುದ್ಧ ಮತದಾರ ತನ್ನ ನಿಲುವು ಬದಲಿಸಲಿಲ್ಲ. ಜನತಾ ನ್ಯಾಯಾಲಯದ ಈ ತೀರ್ಪು ಸ್ವಾಗತಾರ್ಹ ಎಂದು ಕುಮಾರಸ್ವಾಮಿ ಆಮ್ ಆದ್ಮಿ ಸಾಧನೆಯನ್ನು ಕೊಂಡಾಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು