ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಾಸ್ಟ್ಯಾಗ್ ಕಡ್ಡಾಯ: ಡಿಸೆಂಬರ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್‌ಗಳಲ್ಲಿ ಜಾರಿ

Last Updated 20 ನವೆಂಬರ್ 2019, 12:29 IST
ಅಕ್ಷರ ಗಾತ್ರ

ಬೆಂಗಳೂರು:ಡಿಸೆಂಬರ್ 1ರಿಂದ ರಾಜ್ಯದ ಎಲ್ಲಾ 40 ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್ಯಾಗ್ ಕಡ್ಡಾಯ, ಇದನ್ನು ಮಾಡಿಸದಿದ್ದರೆ ದುಪ್ಪಟ್ಟು ಟೋಲ್ ಪಾವತಿಸಬೇಕಾಗುತ್ತದೆ.

'ಎಲ್ಲ ಬ್ಯಾಂಕ್ ಶಾಖೆಗಳಲ್ಲಿ ₹ 500ಕ್ಕೆ ಫಾಸ್ಟ್ಯಾಗ್ ಸಿಗುತ್ತದೆ. ಟೋಲ್ ಪ್ಲಾಜಾಗಳಲ್ಲೂ ಸಿಗುತ್ತವೆ. ಇದರಿಂದ ಟೋಲ್ ಪ್ಲಾಜಾಗಳಲ್ಲಿ ಸರದಿ ಸಾಲಿನಲ್ಲಿ ನಿಲ್ಲದೆ ವಾಹನ ಚಾಲನೆ ಮಾಡುತ್ತ ಸಾಗಬಹುದಾಗಿದೆ" ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಆರ್ ಕೆ ಸೂರ್ಯವಂಶಿ ಬುಧವಾರ ಇಲ್ಲಿ ಪ್ರಜಾವಾಣಿಗೆ ತಿಳಿಸಿದರು.

ಡಿ 1 ರ ನಂತರ ಟೋಲ್ ಪ್ಲಾಜಾದ ಎಲ್ಲ ದ್ವಾರಗಳೂ ಫಾಸ್ಟ್ಯಾಗ್ ಗೆ ಬದಲಾಗಲಿವೆ. ದೇಶದಾದ್ಯಂತ ಈ ವ್ಯವಸ್ಥೆ ಜಾರಿಗೆ ಬರುತ್ತದೆ. ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಹಣ ಇರುವಂತೆ ನೋಡಿಕೊಳ್ಳಬೇಕು, ಇಲ್ಲವಾದರೆ ಪ್ಲಾಜಾದಲ್ಲಿ ಬಾಗಿಲು ತೆರೆಯುವುದಿಲ್ಲ. ಹಣ ಇಲ್ಲದಿದ್ದರೆ ಎಚ್ಚರಿಸುವ ವ್ಯವಸ್ಥೆಯೂ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT