ಸೋಮವಾರ, ಏಪ್ರಿಲ್ 6, 2020
19 °C

ಇಬ್ಬರು ಮಕ್ಕಳನ್ನು ಕೊಂದ ತಂದೆ: ಪೋಲಿಸರ ವಶಕ್ಕೆ ಆರೋಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಾನು ಹೇಳಿದಂತೆ ಕೇಳುತ್ತಿಲ್ಲ ಎಂದು ತನ್ನ ಇಬ್ಬರು ಮಕ್ಕಳನ್ನು ತಂದೆಯೇ ಕತ್ತು ಹಿಸುಕಿ, ಉಸಿರು ಗಟ್ಟಿಸಿ ಕೊಲೆ ಮಾಡಿದ ಘಟನೆ  ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 

ಅಕ್ಷಯನಗರದ ಹನಿ ಡೀವ್ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದ್ದು, ತೌಶಿನಿ (3) ಮತ್ತು ಶಾಸ್ತಾ (1.5) ಕೊಲೆಯಾದ ಮಕ್ಕಳು ಎಂದು ಗುರುತಿಸಲಾಗಿದೆ. ಕೊಲೆ ಮಾಡಿರುವ ತಂದೆ, ಕೇರಳ ಜತಿನ್ (35) ಮಾನಸಿಕ ಅಸ್ವಸ್ಥ ಎನ್ನಲಾಗಿದೆ.

ತಮಿಳುನಾಡಿನ ನಿವಾಸಿ, ಸಾಫ್ಟ್ ವೇರ್ ಎಂಜಿನಿಯರ್ ಲಕ್ಷ್ಮಿ ಶಂಕರಿ ಎಂಬಾಕೆಯನ್ನು ಪ್ರೀತಿಸಿ ಕೆಲವು ವರ್ಷಗಳ ಹಿಂದೆ ಜತಿನ್ ಮದುವೆಯಾಗಿದ್ದ. ಲಕ್ಷ್ಮಿ ಕೆಲಸಕ್ಕೆ ಹೋಗುತ್ತಿದ್ದರೆ,  ಈತ ಎಲ್ಲೂ ಹೋಗದೆ ಮನೆಯಲ್ಲೇ ಇದ್ದ. ಅಲ್ಲದೆ, ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಇದೇ ಕಾರಣಕ್ಕೆ ಗಂಡ ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಶುಕ್ರವಾರ ಕೂಡಾ ಜಗಳ ನಡೆದಿದ್ದು, ಈ ವೇಳೆ ಆತ ಮಕ್ಕಳ ಮೇಲೆ ಕ್ರೌರ್ಯ ಮೆರೆದಿದ್ದಾನೆ ಎಂದೂ ಗೊತ್ತಾಗಿದೆ.

ಶುಕ್ರವಾರ ಕೂಡಾ ಲಕ್ಷ್ಮಿ ಕೆಲಸಕ್ಕೆ ಹೋಗಿದ್ದರು. ಆದರೆ, ಮನೆಯಲ್ಲೇ ಇದ್ದ ಜತಿನ್, ಮಕ್ಕಳು ತಾನು ಹೇಳಿದ್ದು ಕೇಳಿಲ್ಲ ಎಂಬ ಕಾರಣಕ್ಕೆ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.  ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು