ಬುಧವಾರ, ಅಕ್ಟೋಬರ್ 28, 2020
20 °C

ಹಿರಿಯ ಸಾಹಿತಿ ಗೀತಾ ನಾಗಭೂಷಣ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಗದಗ ನಗರದಲ್ಲಿ ನಡೆದಿದ್ದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ‌ಸಮ್ಮೇಳನದ ಅಧ್ಯಕ್ಷೆಯಾಗಿದ್ದ ಗೀತಾ ನಾಗಭೂಷಣ ಅವರು ಭಾನುವಾರ ರಾತ್ರಿ (78) ನಿಧನರಾದರು.

1942ರ ಮಾರ್ಚ್ 25ರಂದು ಜನಿಸಿದ ಅವರು ಎಂ.ಎ. ಪದವಿ ಗಳಿಸಿದ ನಂತರ ನಗರದ ಶ್ರೀ ನಗರೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, ಪ್ರಾಧ್ಯಾಪಕಿಯಾಗಿ, ಪ್ರಾಚಾರ್ಯೆಯಾಗಿ 30 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದರು.

‘ಬದುಕು’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಇವರು ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ (2002) ಕರ್ನಾಟಕ ರಾಜ್ಯ ಪ್ರಶಸ್ತಿ (1998), ನಾಡೋಜ ಪ್ರಶಸ್ತಿ (2004), ಗುಲಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಹೆಗ್ಗಳಿಕೆ ಇವರದು.

ಇದನ್ನೂ ಓದಿ: ಮೊಘಲಾಯಿ ಸೀಮೆಯ ಗಟ್ಟಿ ದನಿಯ ದಿಟ್ಟ ಲೇಖಕಿ ‘ಗೀತಾ ನಾಗಭೂಷಣ’

ಹಸಿಮಾಂಸ ಮತ್ತು ಹದ್ದುಗಳು (ಕಾದಂಬರಿ), ಬದುಕು (ಕಾದಂಬರಿ), ಅವ್ವ ಮತ್ತು ಇತರ ಕಥೆಗಳು (ಕಥಾಸಂಗ್ರಹ), ಸಪ್ತವರ್ಣದ ಹಾಡು, ದುರಗಮುರಗಿಯವರ ಸಂಸ್ಕೃತಿ (ಸಂಶೋಧನೆ), ಜ್ವಲಂತ (ಕಥಾಸಂಗ್ರಹ) ಜೋಗಿಣಿ (ನಾಟಕ), ನನ್ನ ಚೆಲುವು ನಿನ್ನ ಒಲವು ಇತರ ಕೃತಿಗಳನ್ನು ರಚಿಸಿದ್ದಾರೆ.

ಕಲಬುರ್ಗಿಯ ಸ್ವಸ್ತಿಕ್ ನಗರದ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸೋಮವಾರ ನಗರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.‌


ಕಲಬುರ್ಗಿಯ ಸ್ವಸ್ತಿಕ್ ನಗರದ ಮನೆಯಲ್ಲಿ ‌ಡಾ.ಗೀತಾ ನಾಗಭೂಷಣ ಅವರ ಪಾರ್ಥಿವ ಶರೀರವನ್ನು ಇರಿಸಿರುವುದು. 
-ಪ್ರಜಾವಾಣಿ ಚಿತ್ರ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು