ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಗೊಬ್ಬರ, ಕೀಟನಾಶಕದ ಕೊರತೆ ಇಲ್ಲ: ರೈತರಿಗೆ ಅಭಯ ನೀಡಿದ ಕೇಂದ್ರ ಸಚಿವ

Last Updated 8 ಏಪ್ರಿಲ್ 2020, 14:58 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕವೂ ಸೇರಿದಂತೆ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್ ತಿಂಗಳಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್. ಹಾಗಾಗಿ ರೈತರು ಈ ಸಲವೂ ಮಾಮೂಲಿಯಾಗಿ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಸಗೊಬ್ಬರ, ಕೀಟನಾಶಕ ಸೇರಿಂತೆ ಕೃಷಿಸಂಬಂಧಿತ ಎಲ್ಲ ಪರಿಕರಗಳನ್ನು ಅತ್ಯವಶ್ಯಕ ವಸ್ತುಗಳ ಪಟ್ಟಿಗೆ ಸೇರಿಸಿ ಉತ್ಪಾದನೆ ಹಾಗೂ ಸಾಗಣೆ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರವು ಸಂಪೂರ್ಣ ತೆಗೆದುಹಾಕಿತು.ರಸಗೊಬ್ಬರ ಕಾರ್ಖಾನೆಗಳು, ಗೋದಾಮುಗಳು, ಬಂದರಗಳು, ವಿತರಣಾ ಕೇಂದ್ರಗಳ ಮಧ್ಯೆ ರಸಗೊಬ್ಬರ ಸಾಗಣೆ ಬೇಡಿಕೆಗೆ ಅನುಗುಣವಾಗಿ ಗೂಡ್ಸ್‌ ರೈಲುಗಳನ್ನು ಒದಗಿಸುವಂತೆ ರೇಲ್ವೆ ಇಲಾಖೆಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಆದೇಶ ನೀಡಿದೆ. ಹಾಗಿಯೇ ಜಲ ಹಾಗೂ ಭೂಸಾರಿಗೆಗೆ ರಸಗೊಬ್ಬರ, ಕೀಟನಾಶಕ ಮತ್ತಿತರ ಕೃಷಿಸಂಬಂಧಿತ ಸರಕುಗಳನ್ನು ಸಾಗಾಣಿಕೆಗೆ ಮುಕ್ತ ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಇನ್ನೂ ಹಲವು ತಿಂಗಳಿಗೆ ಸಾಕಾಗುವಷ್ಟು ರಸಗೊಬ್ಬರ ದಾಸ್ತಾನು ಇದೆ. ಸದ್ಯ 86.87 ಲಕ್ಷ ಮೆಟ್ರಿಕ್‌ ಟನ್‌ ಯೂರಿಯಾ ದಸ್ತಾನು ಇದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ 7.57 ಲಕ್ಷ ಟನ್‌ ಯೂರಿಯಾ ಆಮದು ಮಾಡಿಕೊಳ್ಳಲಾಗುತ್ತಿದೆ.
ದೇಶಾದ್ಯಂತ ರಸಗೊಬ್ಬರ ಮಳಿಗೆಗಳೂ ತೆರೆದಿದ್ದು ಎಂದಿನಂತೆ ವಹಿವಾಟು ನಡೆಸಿವೆ. ಕರ್ನಾಟಕದಲ್ಲಿ ಸಾಗಣೆ, ಪೂರೈಕೆಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಕೃಷಿ ಸಹಾಯವಾಣಿ 080–-22212818 / 22210237 ಗೆ ಕರೆಮಾಡಿ ಬಗೆಹರಿಸಿಕೊಳ್ಳಬಹುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT