ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬು ದರ ನಿಗದಿಗಾಗಿ ಹೋರಾಟ: ರೈತರನ್ನು ವಶಕ್ಕೆ ಪಡೆದ ಪೊಲೀಸರು

Last Updated 18 ನವೆಂಬರ್ 2018, 9:24 IST
ಅಕ್ಷರ ಗಾತ್ರ

ಬೆಳಗಾವಿ:ಕಬ್ಬು ದರ ನಿಗದಿ, ಬಾಕಿ ಬಿಲ್‌ಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ರೈತರನ್ನು ವಶಕ್ಕೆ ಪಡೆದಿರುವ ಪೊಲೀಸರು ಹಿರೇಬಾಗೇವಾಡಿ ಠಾಣೆಗೆ ಕರೆದೊಯ್ದರು.

ಬಳಿಕ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಿ.ಸಿ. ರಾಜಪ್ಪ, ‘ನಮ್ಮ ಗಮನ ಬೇರೆಡೆ ಸೆಳೆದು ರೈತರು ಇಲ್ಲಿಗೆ ಬಂದಿದ್ದಾರೆ. ನಾವೆಲ್ಲರೂ ಜಿಲ್ಲಾದಿಕಾರಿ ಕಚೇರಿ ಬಳಿ ಇದ್ದೆವು. ಯಾವುದೇ ಭದ್ರತಾ ಲೋಪ ಉಂಟಾಗಿಲ್ಲ’ ಎಂದು ತಿಳಿಸಿದರು.

‘ನವೆಂಬರ್‌ 19ರಂದು ಬೆಳಗಾವಿಗೆ ಬರುವುದಾಗಿ ಹೇಳಿದ್ದ ಮುಖ್ಯಮಂತ್ರಿಗಳು ಮಾತು ತಪ್ಪಿದ್ದಾರೆ. ಅವರು ಬರುವ ಬದಲಿಗೆ, ನಮ್ಮನ್ನೇ ಬೆಂಗಳೂರಿಗೆ ಬರುವಂತೆ ಹೇಳಿಕೆ ನೀಡಿದ್ದಾರೆ. ಅವರು ಇಲ್ಲಿಗೆ ಬರುವವರೆಗೂ ಪ್ರತಿಭಟನೆ ಮುಂದುವರಿಸಲಾಗುವುದು’ ಎಂದು ಹೇಳಿದ್ದ ರೈತ ಮುಖಂಡರುಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಮುಂದುವರಿಸಿದ್ದರು.

ಈ ವೇಳೆ ವಶಕ್ಕೆ ಪಡೆಯಲು ಬಂದ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.ನಂತರ, ಸುವರ್ಣ ವಿಧಾನಸೌಧದ ಒಳಗೆ ಇದ್ದ ಲಾರಿಗಳನ್ನು ಪೊಲೀಸರು ತೆರವು ಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT