ಸೋಮವಾರ, ಅಕ್ಟೋಬರ್ 14, 2019
22 °C

ಕಟ್ಟಡ ನಿರ್ಮಾಣ ನಿಯಮ ಉಲ್ಲಂಘನೆಗೆ ಅವಕಾಶ: ಇನ್ನು ಮುಂದೆ ಅಧಿಕಾರಿಗಳಿಗೂ ದಂಡ

Published:
Updated:

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ‌ ನೀಡುವ ಅಧಿಕಾರಿಗಳಿಗೆ ದಂಡ ನಿಗದಿಪಡಿಸುವ ಸಂಬಂಧ ಕರಡು ನಿಯಮಗಳನ್ನು ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ಕರಡು ಅಧಿಸೂಚನೆಯನ್ನು ವಿಭಾಗೀಯ ನ್ಯಾಯಪೀಠಕ್ಕೆ ನೀಡಿದ ಸರ್ಕಾರದ ಪರ ವಕೀಲರು, ‘ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು 30 ದಿನ ಕಾಲಾವಕಾಶ ನೀಡಲಾಗಿದೆ’ ಎಂದು ತಿಳಿಸಿದರು.

ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 18ಕ್ಕೆ ಮುಂದೂಡಿದೆ.‌

Post Comments (+)