ಮಂಗಳವಾರ, ಜೂನ್ 2, 2020
27 °C

ಲಾಕ್ ಡೌನ್ ಉಲ್ಲಂಘಿಸಿ ಪ್ರಾರ್ಥನೆಯಲ್ಲಿ ಭಾಗಿ:19 ಮಂದಿ ವಿರುದ್ಧ ಎಫ್‌ಐಆರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಜಿಲ್ಲಾಡಳಿತದ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ 19 ಮಂದಿಯ ವಿರುದ್ಧ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಭಾನುವಾರ ಬೆಳಿಗ್ಗೆ ಎಫ್ ಐಆರ್ ದಾಖಲಾಗಿದೆ.

ನಗರದ ಪತ್ತೇಶಾವಲಿ ದರ್ಗಾದ ಆವರಣದಲ್ಲಿದ್ದ ಕೊಠಡಿಯಲ್ಲಿ ಶನಿವಾರ ರಾತ್ರಿ ಎಲ್ಲರೂ ಸಾಮೂಹಿಕ ಪ್ರಾರ್ಥನೆಯಲ್ಲಿ (ನಮಾಜ್) ತೊಡಗಿದ್ದರು.

ಸುದ್ದಿ ತಳಿದು ಸ್ಥಳಕ್ಕೆ ತೆರಳಿದ್ದ ಪೊಲೀಸರು ಪ್ರಾರ್ಥನೆ ಮುಗಿಸಿ ಹೊರಬಂದವರಿಗೆ ಲಾಠಿ ಚಾರ್ಜ್ ಮಾಡಿದ್ದರು. ಬೆಳಿಗ್ಗೆ ಎಲ್ಲರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು