ಬುಧವಾರ, ಜನವರಿ 29, 2020
23 °C

ದ್ವೇಷ, ಪ್ರಚೋದನಾಕಾರಿ ಹೇಳಿಕೆ: ಸೋಮಶೇಖರ ರೆಡ್ಡಿ ವಿರುದ್ಧ ಎಫ್‌ಐಆರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಮತ್ತು ಪ್ರಚೋದನಾಕಾರಿಯಾಗಿ ಮಾತನಾಡಿರುವ ಶಾಸಕ ಜಿ. ಸೋಮಶೇಖರ ರೆಡ್ಡಿ ವಿರುದ್ಧ ಶನಿವಾರ ಎಫ್‌ಐಆರ್‌ ದಾಖಲಾಗಿದೆ.

ಸೌಹಾರ್ದತೆ ಮತ್ತು ಸಾಮರಸ್ಯಕ್ಕೆ ಭಂಗ ಉಂಟು ಮಾಡುವ ರೀತಿಯಲ್ಲಿ ಸೋಮಶೇಖರ ರೆಡ್ಡಿ ಮಾತನಾಡಿರುವ ಹಿನ್ನೆಲೆಯಲ್ಲಿ ಇಲ್ಲಿನ ಗಾಂಧಿನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.  

ಸ್ಥಳೀಯ ಕಾಂಗ್ರೆಸ್‌ ಮುಖಂಡ ವಿವೇಕ್‌ ನೀಡಿದ ದೂರಿನ ಅನ್ವಯ ಸೋಮಶೇಖರ ರೆಡ್ಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. 

ಇದನ್ನೂ ಓದಿ: ನಮ್ಮ ದೇಶದಲ್ಲಿರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು: ಶಾಸಕ ಸೋಮಶೇಖರ ರೆಡ್ಡಿ

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಶುಕ್ರವಾರ ನಗರದಲ್ಲಿ ನಡೆದ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ದೇಶದ ಭದ್ರತೆಗೆ ಪೌರತ್ವ ತಿದ್ದುಪಡಿ ಕಾಯ್ದೆ ತರಲಾಗಿದ್ದು, ಅದನ್ನು ಎಲ್ಲರೂ ಬೆಂಬಲಿಸಬೇಕು. ಕಾಯ್ದೆ ವಿರೋಧಿಸಿ ಮತ್ತೊಂದು ಸಲ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದರೆ ನಾವು ಸುಮ್ಮನೆ ಕೂರಲ್ಲ. ನಮ್ಮ ದೇಶದಲ್ಲಿ ಇರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತೆ. ಹಿಂದೂಗಳನ್ನು ಕೆಣಕಬೇಡಿ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಎಚ್ಚರಿಕೆ ನೀಡಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು