ಬುಧವಾರ, ಜೂನ್ 23, 2021
30 °C

ಎಸ್ಸೆಸ್ಸೆಲ್ಸಿ ಪರೀಕ್ಷೆ ನಕಲು ಮಾಡಿಸಲು ಯತ್ನ: ಐವರ ವಿರುದ್ಧ ಎಫ್‌ಐಆರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರೇಕೆರೂರ (ಹಾವೇರಿ ಜಿಲ್ಲೆ): ಇಲ್ಲಿನ ಸಂಗಮೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಗುರುವಾರ ಅಕ್ರಮವಾಗಿ ಪ್ರವೇಶ ಮಾಡಿ, ನಕಲು ಮಾಡಿಸಲು ಪ್ರಯತ್ನ ಮಾಡಿದ ಆರೋಪದ ಮೇಲೆ ನಾಲ್ವರು ಶಿಕ್ಷಕರು ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

ಶಿಕ್ಷಕರಾದ ಜಗದೀಶ ಶಿವಪ್ಪನವರ, ಮನೋಹರ ಬಿ.ಆರ್., ಗುತ್ತೆಪ್ಪ ಬಾಳಂಬೀಡ ಹಾಗೂ ಶಿವಯೋಗಿ ರಾಗಿ ಬಂಧನಕ್ಕೆ ಒಳಗಾದವರು.

‘ಈ ನಾಲ್ವರು ಶಿಕ್ಷಕರು ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದ ಮೇಲೆ ಇದ್ದವರಲ್ಲ. ನಾನು ದಿಢೀರ್‌ ಭೇಟಿ ನೀಡಿದ ಸಂದರ್ಭ ಇವರು ಓಡಿ ಹೋಗಲು ಯತ್ನಿಸಿದರು. ತಕ್ಷಣ ಅವರನ್ನು ತಡೆದು ವಿಚಾರಣೆ ನಡೆಸಿದಾಗ, ಅವರ ಬಳಿ ದ್ವಿತೀಯ ಭಾಷಾ ಪತ್ರಿಕೆಗೆ ಸಂಬಂಧಿಸಿದ ನಕಲು ಚೀಟಿಗಳು ಇದ್ದವು. ಹಾಗಾಗಿ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದೇನೆ’ ಎಂದು ತಹಶೀಲ್ದಾರ್‌ ಆರ್‌.ಎಚ್‌. ಭಾಗವಾನ್‌ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

 ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ನಾಗರಾಜ ಸುಂಕಾಪುರ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು