ಸಿಎಂ ಕುಮಾರಸ್ವಾಮಿ ಕಾರಿನಲ್ಲಿ ಬೆಂಕಿ: ಅಪಾಯದಿಂದ ಪಾರು

ಬುಧವಾರ, ಏಪ್ರಿಲ್ 24, 2019
33 °C

ಸಿಎಂ ಕುಮಾರಸ್ವಾಮಿ ಕಾರಿನಲ್ಲಿ ಬೆಂಕಿ: ಅಪಾಯದಿಂದ ಪಾರು

Published:
Updated:

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಪೀಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಕಾರಣ ಕೆಲ ಹೊತ್ತು ಆತಂಕದ ಸ್ಥಿತಿ ಉಂಟಾಗಿತ್ತು.  ಮುಖ್ಯಮಂತ್ರಿ ಅಪಾಯದಿಂದ ಪಾರಾಗಿದ್ದಾರೆ.

ಕುಮಾರಸ್ವಾಮಿ ರಾತ್ರಿ ಪ್ರಚಾರ ಮುಗಿಸಿ ಕೆಆರ್‌ಎಸ್ನ ಖಾಸಗಿ ಹೋಟೆಲ್ ನಲ್ಲಿ ತಂಗಲು ತೆರಳುತ್ತಿದ್ದಾಗ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಎಂಜಿನ್ ಬಿಸಿಯಾಗಿದ್ದು ಹೊಗೆ ಕಾಣಿಸಿಕೊಂಡು ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿಯನ್ನು ಕೆಳಗಿಳಿಸಿ ಬೇರೆ ಕಾರಿನಲ್ಲಿ ಕಳುಹಿಸಿದರು. ಭದ್ರತಾ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದರು. ಎಂಜಿನ್ ಆಯಿಲ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 8

  Happy
 • 16

  Amused
 • 6

  Sad
 • 1

  Frustrated
 • 4

  Angry

Comments:

0 comments

Write the first review for this !