ಗುರುವಾರ , ಜುಲೈ 29, 2021
21 °C

ಮೈಸೂರಿನ ಮೆಗಾ ಮೆಡಿಕಲ್ಸ್ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅನಾಹುತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿರುವ ಮೆಗಾ ಮೆಡಿಕಲ್ಸ್ ಬಹುಮಹಡಿ ಕಟ್ಟಡದಲ್ಲಿ ಶನಿವಾರ ನಸುಕಿನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.

ಮೂರು ಮಹಡಿ ಕಟ್ಟಡದಲ್ಲಿ ನಸುಕಿನ 3 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತು. 9 ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಗೆ ಬಳಕೆ ಮಾಡಿಕೊಳ್ಳಲಾಯಿತು. 60 ಮಂದಿ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

'ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ. ಬೆಳಿಗ್ಗೆಯಷ್ಟೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ನಷ್ಟದ ಅಂದಾಜು ಇನ್ನಷ್ಟೇ ನಡೆಯಬೇಕಿದೆ' ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಾಜು 'ಪ್ರಜಾವಾಣಿ'ಗೆ ತಿಳಿಸಿದರು.

ಕಾರ್ಯಾಚರಣೆಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಾದ ರಾಜು, ನವೀನ್, ಗಂಗಾನಾಯಕ ಹಾಗೂ ಭರತ್ ಕುಮಾರ್, ಠಾಣಾಧಿಕಾರಿಗಳಾದ ಗಂಗಾಧರ, ನಾಗರಾಜುಅರಸ್, ಶಿವಸ್ವಾಮಿ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು