ಶನಿವಾರ, ಮಾರ್ಚ್ 6, 2021
28 °C

ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು: ಮುತ್ತಪ್ಪ‌ ರೈ ಗನ್‌ಮ್ಯಾನ್‌ಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಮುತ್ತಪ್ಪ‌ ರೈ ಅವರ ಅಂತ್ಯಕ್ರಿಯೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರು ಜನ ಗನ್‌ಮ್ಯಾನ್ ಗಳನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಕ್ಯಾನ್ಸರ್‌ ಗೆಲ್ಲಲಾರದೇ ಬದುಕಿನಿಂದ ಹೊರನಡೆದ ಮುತ್ತಪ್ಪ ರೈ

ಶುಕ್ರವಾರ ಸಂಜೆ ಬಿಡದಿಯಲ್ಲಿ ನಡೆದ ಅಂತ್ಯಕ್ರಿಯೆ ಸಂದರ್ಭ ಆರೋಪಿಗಳು ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದ್ದು, ಡಬಲ್ ಬ್ಯಾರಲ್ ಗನ್ ಗಳನ್ನು ವಶಕ್ಕೆ ಪಡೆಯಲಾಗಿದೆ. 

ಇದನ್ನೂ ಓದಿ: 

ಮೋನಪ್ಪ, ಗಿರೀಶ್, ಲಕ್ವಿರ್ ಸಿಂಗ್, ಚಾತರ್ ಸಿಂಗ್, ರಂಜಿತ್ ರೈ‌ ಹಾಗೂ ಸುನಿಲ್ ಬಂಧಿತರು. ಅಲ್ಲದೇ ಅಂತ್ಯಸಂಸ್ಕಾರ‌ ಕಾರ್ಯಕ್ರಮದಲ್ಲಿ ಕಾನೂನು ಉಲ್ಲಂಘಿಸಿದ ಆರೋಪದ ಮೇಲೆ‌ ಮುತ್ತಪ್ಪ ರೈ ಸಂಬಂಧಿ ಪ್ರಕಾಶ್ ರೈ ಅವರನ್ನೂ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು